ವಿಳಂಬ ಸಾಲ ಮರುಪಾವತಿಗೆ ಅನುಮತಿ?
Team Udayavani, Mar 21, 2020, 12:44 PM IST
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ನೆರವು ನೀಡುವ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ವಿಶೇಷವಾಗಿ ಸಾಲ ಮರು ಪಾವತಿಯನ್ನು ವಿಳಂಬವಾಗಿ ಮಾಡುವುದರ ಬಗ್ಗೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದೆ.ಈ ಬಗ್ಗೆ ಶುಕ್ರವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆ ಖಾತೆ ಸಚಿವಾಲಯದ ಅಧಿಕಾರಿಗಳು ವಿತ್ತ ಸಚಿವಾಲಯದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.
ವಿತ್ತ ಸಚಿವರಿಂದ ಪರಿಶೀಲನೆ: ಮಾರಕ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಸದ್ಯದ ಅರ್ಥ ವ್ಯವಸ್ಥೆಯ ಪರಿಶೀಲನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಡೆಸಿದ್ದಾರೆ. ನಾಗರಿಕ ವಿಮಾನಯಾನ ಸಚಿವಾಲಯ, ಪಶುಸಂಗೋಪನೆ, ಪ್ರವಾಸೋದ್ಯಮ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯೋಗ ಖಾತೆ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಅದರಲ್ಲಿ ಭಾಗವಹಿಸಿದ್ದರು. ವಿತ್ತ ಸಚಿವಾಲಯ ಶನಿವಾರ ಆಂತರಿಕವಾಗಿ ಮತ್ತೂಂದು ಪರಿಶೀಲನಾ ಸಭೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.