ನಗದು ವಹಿವಾಟು ಮಿತಿ 3ರಿಂದ 2 ಲಕ್ಷ ರೂ.ಗೆ ಇಳಿಸಲು ಕೇಂದ್ರದ ಪ್ರಸ್ತಾಪ
Team Udayavani, Mar 21, 2017, 7:49 PM IST
ಹೊಸದಿಲ್ಲಿ : ಕೇಂದ್ರ ಸರಕಾರಕಪ್ಪು ಹಣದ ವಿರುದ್ಧ ತನ್ನ ಹೋರಾಟವನ್ನು ಮುಂದುವರಿಸಿರು ವಂತೆಯೇ, ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಅವರಿಂದು ಬಜೆಟ್‌ನಲ್ಲಿ ಪ್ರಸ್ತಾವಿಸಿದ್ದ ನಗದು ವಹಿವಾಟಿನ 3 ಲಕ್ಷ ರೂ.ಗಳ ಗರಿಷ್ಠ ಮಿತಿಯನ್ನು 2 ಲಕ್ಷ ರೂ.ಗೆ ಇಳಿಸುವ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ.
ಬಜೆಟ್‌ನಲ್ಲಿ ಪ್ರಸ್ತಾವಿಸಿದಂತೆ ನಗದು ವಹಿವಾಟಿನ 3 ಲಕ್ಷ ರೂ.ಗಳ ಗರಿಷ್ಠ ಮಿತಿಯು ಇದೇ ಎಪ್ರಿಲ್ 1ರಿಂದ ಜಾರಿಗೆ ಬರುವುದಿತ್ತು. ಈ ಮಿತಿಯನ್ನು 2 ಲಕ್ಷ ರೂ.ಗಳಿಗೆ ಇಳಿಸುವ ಪ್ರಸ್ತಾವವನ್ನು ಜೇತ್ಲಿ ಅವರಿಂದು ಸರಕಾರದ ಮುಂದಿರಿಸಿದರು.
ಕಪ್ಪು ಹಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡವು ಗರಿಷ್ಠ ನಗದು ವಹಿವಾಟಿಗೆ 3 ಲಕ್ಷ ರೂ.ಗಳ ಮಿತಿ ಹೇರಬೇಕೆಂದು ಶಿಫಾರಸು ಮಾಡಿತ್ತು. ಈ ವಿಶೇಷ ತನಿಖಾ ತಂಡವನ್ನು ಸುಪ್ರೀಂ ಕೋರ್ಟ್ ರೂಪಿಸಿತ್ತು. ಅದರ ಶಿಫಾರಸನ್ನು ಜೇತ್ಲಿ ಅವರು 2017-18ರ ಬಜೆಟ್‌ನಲ್ಲಿ ನಮೂದಿಸಿದ್ದರು.
ನಿವೃತ್ತ ಜಸ್ಟಿಸ್ ಎಂ ಬಿ ಶಾ ನೇತೃತ್ವದ ವಿಶೇಷ ತನಿಖಾ ತಂಡವು ಕಳೆದ ವರ್ಷ ಜುಲೈಯಲ್ಲಿ ಕಪ್ಪು ಹಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತನ್ನ ಐದನೇ ವರದಿಯನ್ನು ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.