ಜು.1ರಿಂದ ಜಿಎಸ್‌ಟಿ ಜಾರಿ; ದೇಶದ ಆರ್ಥಿಕತೆಗೆ Turning Point: ಮೋದಿ
Team Udayavani, Jun 5, 2017, 4:29 PM IST
ಹೊಸದಿಲ್ಲಿ : ಮುಂದಿನ ಜುಲೈ 1ರಿಂದ ಜಾರಿಗೆ ಬರಲಿರುವ ಜಿಎಸ್‌ಟಿ ದೇಶದ ಆರ್ಥಿಕತೆಯ ದಿಕ್ಕನ್ನು ಬದಲಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯಿದೆಯ ಅನುಷ್ಠಾನವು ರಾಜಕೀಯ ಪಕ್ಷಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲ ಹಿತಾಸಕ್ತರ ಸಂಘಟಿತ ಪರಿಶ್ರಮದ ಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಜಿಎಸ್‌ಟಿ ಯಿಂದಾಗಿ ರೂಪುಗೊಳ್ಳುವ ಏಕ ರಾಷ್ಟ್ರ, ಏಕ ಮಾರುಕಟ್ಟೆ, ಏಕ ತೆರಿಗೆಯಿಂದಾಗಿ ಜನಸಾಮಾನ್ಯರಿಗೆ ಮಹತ್ತರವಾದ ಲಾಭವಾಗಲಿದೆ ಎಂದು ಪ್ರಧಾನಿ ಮೋದಿ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು.
ಜಿಎಸ್‌ಟಿಗೆ ಸಂಬಂಧಿಸಿದ ಐಟಿ ವ್ಯವಸ್ಥೆಯಲ್ಲಿನ ಸೈಬರ್ ಭದ್ರತೆಗೆ ಗರಿಷ್ಠ ಎಚ್ಚರವಹಿಸುವಂತೆ ಪ್ರಧಾನಿಯವರು ಅಧಿಕಾರಿಗಳಿಗೆ ಆದೇಶಿಸಿದರು.
ಮುಂದಿನ ತಿಂಗಳು ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿರುವ ಜಿಎಸ್‌ಟಿಯ ಅನುಷ್ಠಾನ ಸಂಬಂಧದ ಸನ್ನದ್ಧತೆಯನ್ನು ಪ್ರಧಾನಿ ಮೋದಿ ಅವಲೋಕಿಸಿದರು
ಈ ಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇತ್ಲಿ, ಕಂದಾಯ ಕಾರ್ಯದರ್ಶಿ ಹಸ್‌ಮುಖ್ ಅಧಿಯಾ ಮತ್ತು ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಯ (ಸಿಬಿಇಸಿ) ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಜಿಎಸ್‌ಟಿ ಮಂಡಳಿಯು ತೆರಿಗೆ ದರಗಳನ್ನು ಅಂತಿಮಗೊಳಿಸಿದ ಬಳಿಕದಲ್ಲಿ ಪ್ರಧಾನಿ ಮೋದಿ ನಡೆಸುತ್ತಿರುವ ಮೊದಲ ಹಾಗೂ ಮೇ 2ರ ಬಳಿಕದ ಎರಡನೇ ಪರಾಮರ್ಶೆ ಸಭೆ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.