ಕಚೇರಿ ಕಿರುಕುಳ, ತಾರತಮ್ಯ ಪ್ರತಿಭಟಿಸಿ ಹೊರನಡೆದ ಗೂಗಲ್ ನೌಕರರು
Team Udayavani, Nov 1, 2018, 7:26 PM IST
ಸ್ಯಾನ್‌ಫ್ರಾನ್ಸಿಸ್ಕೋ : ಕಂಪೆನಿಯ ಕಚೇರಿಗಳಲ್ಲಿ ತಮ್ಮ ಮೇಲೆ ನಡೆಯುತ್ತಿರುವ ಶೋಷಣೆ, ಕಿರುಕುಳವನ್ನು ಪ್ರತಿಭಟಿಸಿ ಏಶ್ಯದಲ್ಲಿನ ನೂರಾರು ಗೂಗಲ್ ನೌಕರರು ಮತ್ತು ಗುತ್ತಿಗೆದಾರರು ಇಂದು ಮಧ್ಯಾಹ್ನ ಕಾರ್ಯಾಲಯದಿಂದ ಹೊರ ನಡೆದ ಅತ್ಯಪರೂಪದ ವಿದ್ಯಮಾನ ನಡೆಯಿತು.
ದುಡಿಯುವ ಸ್ಥಳದಲ್ಲಿ (ಕಚೇರಿಯಲ್ಲಿ) ಕಂಪೆನಿಯ ಕಾರ್ಯನಿರ್ವಾಹಕರಿಂದ ನೌಕರರ ಮೇಲೆ ಅನಿರ್ಬಂಧಿತ ಅಧಿಕಾರ ಪ್ರಯೋಗ, ಜನಾಂಗೀಯತೆ, ಲೈಂಗಿಕ ಶೋಷಣೆಯೇ ಮೊದಲಾದ ಅತಿರೇಕಗಳನ್ನು ಪ್ರತಿಭಟಿಸಲು ವಿಶ್ವಾದ್ಯಂತದ ಗೂಗಲ್ ಕಾರ್ಯಾಲಯಗಳಿಂದ ಹಲವು ಸಾವಿರ ಮಂದಿ ನೌಕರರು ಹೊರಬಂದು ಪ್ರತಿಭಟಿಸುವ ನಿರೀಕ್ಷೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ನಿನ್ನೆ ಬುಧವಾರ ತಡವಾಗಿ ಹೊರಡಿಸಲಾಗಿರುವ ಹೇಳಿಕೆಯಲ್ಲಿ ಸಂಘಟಕರು ಗೂಗಲ್ ಮಾತೃ ಸಂಸ್ಥೆಯಾಗಿರುವ Alphabet Inc. ಮುಖ್ಯಸ್ಥರನ್ನು ಭೇಟಿಯಾಗಿ ಕಂಪೆನಿಯ ನಿರ್ದೇಶಕರ ಮಂಡಳಿಯಲ್ಲಿ ನೌಕರ ಪ್ರತಿನಿಧಿಯೋರ್ವರನ್ನು ಸೇರಿಸಿಕೊಳ್ಳುವಂತೆ ಮತ್ತು ವೇತನ-ಸಮಾನತೆ ಅಂಕಿ ಅಂಶವನ್ನು ಆಂತರಿಕವಾಗಿ ಹಂಚಿಕೊಳ್ಳುವಂತೆ ಮನವಿ ಮಾಡಿದರು; ಜತೆಗೆ ಕಾರ್ಯ ಸ್ಥಳದಲ್ಲಿನ ಕಿರುಕುಳ-ಸಂಬಂಧಿ ಪರಿಹಾರ ಕೋರಿಕೆ ಪ್ರಕರಣಗಳನ್ನು ನ್ಯಾಯೋಚಿತವಾಗಿ ಇತ್ಯರ್ಥಪಡಿಸುವ ದಿಶೆಯಲ್ಲಿನ ಮಾನವ ಸಂಪನ್ಮೂಲ ಉಪಕ್ರಮಗಳಿಗೆ ಬದಲಾವಣೆ ತರಬೇಕು ಎಂದು ವರದಿಗಳು ತಿಳಿಸಿವೆ.
Alphabet ನ 94,000 ಕ್ಕೂ ಅಧಿಕ ಉದ್ಯೋಗಿಗಳಲ್ಲಿ ಮತ್ತು ಹತ್ತಾರು ಸಾವಿರ ಗುತ್ತಿಗೆದಾರರಲ್ಲಿ ಲಿಂಗ, ಜನಾಂಗ, ವೇತನ ತಾರತಮ್ಯ ಮತ್ತು ಸರ್ವಾಧಿಕಾರಿ ಪ್ರವೃತ್ತಿಯ ಕಿರುಕುಳದ ಫಲವಾಗಿ ಮಡುಗಟ್ಟಿರುವ ನೋವಿನಲ್ಲಿ ಪ್ರಬಲ ಪ್ರತಿಭಟನೆ ವ್ಯಕ್ತವಾಗಿರುವ ಹೊರತಾಗಿಯೂ ಗೂಗಲ್ ಕಂಪೆನಿಯ ಶೇರುಗಳ ಧಾರಣೆ ಶೇರು ಮಾರುಕಟ್ಟೆಗಳಲ್ಲಿ ಕುಸಿಯದಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.