ಪಿಎಫ್ ಮೇಲೆ ಪರೋಕ್ಷ ತೆರಿಗೆ: ಕೇಂದ್ರ ಸ್ಪಷ್ಟನೆ

2.5 ಲಕ್ಷ ರೂ.ಗಳಿಗಿಂತ ಹೆಚ್ಚಿನದಾದ ಮೊತ್ತ ವನ್ನು ಪ್ರತ್ಯೇಕ ಉಪ ಖಾತೆಗೆ ವರ್ಗಾ ಯಿಸಲಾಗುತ್ತದೆ.

Team Udayavani, Feb 9, 2021, 11:30 AM IST

ಪಿಎಫ್ ಮೇಲೆ ಪರೋಕ್ಷ ತೆರಿಗೆ: ಕೇಂದ್ರ ಸ್ಪಷ್ಟನೆ

ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಅಥವಾ ಸರಕಾರಿ ಭವಿಷ್ಯ ನಿಧಿ (ಜಿಪಿಎಫ್) ಖಾತೆಗಳಿಗೆ ವಾರ್ಷಿಕ ವಾಗಿ ಜಮೆಯಾಗುವ 2.5 ಲಕ್ಷ ರೂ. ಗಳಿಗಿಂತ ಹೆಚ್ಚು ಮೊತ್ತದ ಬಡ್ಡಿಯ ಮೇಲೆ ಪರೋಕ್ಷವಾಗಿ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಕೇಂದ್ರ ಸರಕಾರಿ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿ:ಕೆಂಪುಕೋಟೆ ಗಲಭೆ ಪ್ರಕರಣ: ನಟ ದೀಪ್ ಸಿಧು ಬಂಧಿಸಿದ ದಿಲ್ಲಿ ಪೊಲೀಸರು

ದೇಣಿಗೆ, ಠೇವಣಿ ಮತ್ತು ಹಿಂಪಡೆಯುವಿಕೆ – ಹೀಗೆ ಮೂರೂ ಹಂತಗಳಲ್ಲಿ ತೆರಿಗೆಯಿಂದ ವಿನಾಯಿತಿ ಹೊಂದಿರುವ (ಇಇಇ) ಏಕಮಾತ್ರ ಉಳಿತಾಯ ಮಾರ್ಗ ಪಿಎಫ್ ಆಗಿದೆ. ಕೇಂದ್ರ ಬಜೆಟ್‌ ಮಂಡನೆಯಾದ ಬಳಿಕ ಪಿಎಫ್ ಬಡ್ಡಿಗೂ ತೆರಿಗೆ ವಿಧಿಸುವ ವಿಚಾರ ಮಾಧ್ಯಮಗಳಲ್ಲಿ ಭಾರೀ ಸುದ್ದಿ ಮಾಡಿತ್ತು. ಇದರಿಂದ ಪಿಎಫ್ ಮೇಲಿನ ಬಡ್ಡಿದರವೇ ಪ್ರಮುಖ ಜೀವನೋಪಾಯವಾಗಿರುವ ಅನೇಕ ಹಿರಿಯರು ಚಿಂತೆಗೊಳಗಾಗಿದ್ದರು.ಆದರೆ ಈ ಬಗ್ಗೆ ಕೇಂದ್ರ ಸರಕಾರವೇ ಸ್ಪಷ್ಟನೆ ನೀಡಿದೆ.

ಪಿಎಫ್ ಬಡ್ಡಿಗೆ ತೆರಿಗೆ ವಿಧಿಸುವ ಪ್ರಸ್ತಾವ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಸರಕಾರಿ ಮೂಲಗಳು ಈ ಬಗ್ಗೆ ವಿವರ ಣೆಯನ್ನೂ ನೀಡಿವೆ. ಯಾವುದೇ ಒಂದು ಖಾತೆಗೆ ವಾರ್ಷಿಕವಾಗಿ 2.5 ಲಕ್ಷ ರೂ. ಗಳಿಗಿಂತ ಹೆಚ್ಚು ಪಿಎಫ್ ಅಥವಾ ಜಿಪಿಎಫ್ ಪಾವತಿ ಹರಿದುಬಂದರೆ 2.5 ಲಕ್ಷ ರೂ.ಗಳಿಗಿಂತ ಹೆಚ್ಚಿನದಾದ ಮೊತ್ತವನ್ನು ಪ್ರತ್ಯೇಕ ಉಪ ಖಾತೆಗೆ ವರ್ಗಾಯಿಸಲಾಗುತ್ತದೆ. 2021ರ ಮಾ. 31ರಂತೆ ಆಯಾ ಖಾತೆದಾರನ ಹಿಂದಿನ ಬ್ಯಾಲೆನ್ಸ್‌ ಮತ್ತು ಪ್ರಾಥಮಿಕ ಖಾತೆ ತೆರಿಗೆಯಿಂದ ವಿನಾಯಿತಿ ಹೊಂದಿರುತ್ತದೆ. ಬಡ್ಡಿಯನ್ನೂ ಐಟಿ ರಿಟರ್ನ್ಸ್ ನಲ್ಲಿ ಉಲ್ಲೇಖಿಸಬೇಕಿಲ್ಲ.

ಆದರೆ ವಾರ್ಷಿಕ 2.5 ಲಕ್ಷ ರೂ.ಗಳಿಗಿಂತ ಹೆಚ್ಚುವರಿ ಜಮೆಯಾಗುವ ಮತ್ತು ಉಪ ಖಾತೆಗೆ ವರ್ಗಾವಣೆಯಾಗುವ ಮೊತ್ತವು ಮಾತ್ರ ತೆರಿಗೆಗೆ ಅರ್ಹವಾಗಿರುತ್ತದೆ ಎಂದು ಸರಕಾರಿ ಮೂಲಗಳು ಸ್ಪಷ್ಟಪಡಿಸಿವೆ. ಪಿಎಫ್ ಮತ್ತು ಜಿಪಿಎಫ್ ಖಾತೆದಾರರ ಪೈಕಿ ಇಂತಹ ತೆರಿಗೆಗೆ ಅರ್ಹರಾಗುವವರು ಸುಮಾರು 1.22 ಲಕ್ಷ ಮಂದಿ ಇರುವ ನಿರೀಕ್ಷೆ ಇದ್ದು, ಇದು ಒಟ್ಟು ಖಾತೆದಾರರ 0.25 ಎಂದು ಸರಕಾರಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.