ಇನ್ಫಿ ಸಿಇಒ ವಿರುದ್ಧ ಆರೋಪ : ವ್ಯಕ್ತಿಯಿಂದ ನಿಲೇಕಣಿ, ಸ್ವತಂತ್ರ ನಿರ್ದೇಶಕರಿಗೆ ಪತ್ರ
Team Udayavani, Nov 13, 2019, 1:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್ ಕಂಪೆನಿ, ಇನ್ಫೋಸಿಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಓ) ಸಲಿಲ್ ಪಾರೇಖ್ ವಿರುದ್ಧ ಮತ್ತೂಮ್ಮೆ ಆರ್ಥಿಕ ಅವ್ಯವಹಾರಗಳ ದೂರು ಕೇಳಿ ಬಂದಿದೆ.
ಕಂಪೆನಿಯ ಹಣಕಾಸು ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿ ಎಂದು ಹೇಳಿ ಕೊಂಡಿರುವ ಅನಾಮಧೇಯ ವ್ಯಕ್ತಿ, ಸಂಸ್ಥೆಯ ಅಧ್ಯಕ್ಷ ಹಾಗೂ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಹಾಗೂ ಆಡಳಿತ ಮಂಡಳಿಯ ಸ್ವತಂತ್ರ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಪಾರೇಖ್ ಕಂಪೆನಿ ಸೇರಿ 1 ವರ್ಷ 8 ತಿಂಗಳು ಆಗಿದ್ದು, ಸಿಇಓ ಆಗಿ ಅವರು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಕಾರ್ಯ ನಿರ್ವಹಿಸಬೇಕು.
ಆದರೆ, ಅವರು ಮುಂಬಯಿನಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲಸದ ನಿಮಿತ್ತ ತಿಂಗಳಲ್ಲಿ ಎರಡು ಬಾರಿ ಅವರು ಮುಂಬೈನಿಂದ ಬೆಂಗಳೂರಿಗೆ ಬರುತ್ತಾರೆ. ಇದಕ್ಕಾಗಿ ಸಾರಿಗೆ, ವಿಮಾನ ವೆಚ್ಚ ಸೇರಿ ಕಂಪೆನಿಗೆ 22 ಲಕ್ಷ ರೂ. ನಷ್ಟ ಉಂಟಾಗುತ್ತದೆ. ಮುಂಬಯಿನಿಂದ ಬೆಂಗಳೂರಿಗೆ ಸ್ಥಳಾಂತರಗೊಳ್ಳಲು ಅವರಿಗೆ 2 ತಿಂಗಳ ಕಾಲಾವಕಾಶ ನೀಡಲಾಗಿತ್ತು. ಹೀಗಿದ್ದರೂ ಅವರು ಸ್ಥಳಾಂತರಗೊಳ್ಳದಿರಲು ಕಾರಣವೇನು ಎಂದು ಪ್ರಶ್ನಿಸಲಾಗಿದೆ. ಇತ್ತೀಚೆಗಷ್ಟೇ ಲೆಕ್ಕಪತ್ರಗಳಲ್ಲಿ ಮೋಸ ಮಾಡಲಾಗಿದೆ ಎಂದು ಬರೆದ ಅನಾಮಧೇಯ ಪತ್ರ ವಿವಾದ ಹುಟ್ಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.