PMC ಬ್ಯಾಂಕ್ ಹಗರಣ; ಪ್ರತಿಭಟನೆ ಬಳಿಕ 90 ಲಕ್ಷ ಇಟ್ಟಿದ್ದ ಠೇವಣಿದಾರ ಹೃದಯಾಘಾತದಿಂದ ನಿಧನ
Team Udayavani, Oct 15, 2019, 1:12 PM IST
ಮುಂಬೈ:ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ ಹಗರಣದ ಬಿಕ್ಕಟ್ಟಿನಿಂದ 90 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದ ಬ್ಯಾಂಕ್ ಖಾತೆದಾರರೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿ ಮನೆಗೆ ಮರಳಿದ ನಂತರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ಸೋಮವಾರ ನಡೆದಿದೆ.
ಮುಂಬೈ ಕೋರ್ಟ್ ಹೊರಗೆ ಪಿಎಂಸಿ ಬ್ಯಾಂಕ್ ಹಗರಣದ ಕುರಿತ ಪ್ರತಿಭಟನೆಯಲ್ಲಿ ಸಂಜಯ್ ಗುಲ್ಟಿ(51ವರ್ಷ) ಭಾಗವಹಿಸಿದ್ದರು. ಜೆಟ್ ಏರ್ ವೇಸ್ ಮಾಜಿ ಉದ್ಯೋಗಿಯಾಗಿರುವ ಸಂಜಯ್ ಅವರು ಪಿಎಂಸಿ ಬ್ಯಾಂಕ್ ನಲ್ಲಿ 90 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದರು. ಒಂದೆಡೆ ಕೆಲಸ ಇಲ್ಲ, ಮತ್ತೊಂದೆಡೆ ಬ್ಯಾಂಕ್ ನಲ್ಲಿ ಇಟ್ಟ ಠೇವಣಿ ಹಣ ಪಡೆಯಲು ಸಾಧ್ಯವಾಗದೆ ಒತ್ತಡಕ್ಕೆ ಒಳಗಾಗಿದ್ದರು ಎಂದು ಮತ್ತೊಬ್ಬ ಪ್ರತಿಭಟನಾಕಾರರಾದ ಮನಾಲಿ ನಾರ್ಕರ್ ತಿಳಿಸಿದ್ದಾರೆ.
80ವರ್ಷದ ತಂದೆ ಜತೆ ಸಂಜಯ್ ಗುಲ್ಟಿ ಅವರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು, ಮನೆಗೆ ತೆರಳಿದ್ದರು. ಊಟ ಮಾಡಿ ಮಲಗಿದ್ದ ಸಂಜಯ್ ಗುಲ್ಟಿ ಅವರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವುದಾಗಿ ಓಶಿವಾರಾ ಪೊಲೀಸ್ ಠಾಣಾಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ನಿಂದ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎಚ್ ಡಿಐಎಲ್ ಪಡೆದಿದ್ದ 5000 ಕೋಟಿಗೂ ಅಧಿಕ ಸಾಲವನ್ನು ಮರುಪಾವತಿಸದೇ ಇದ್ದ ಹಿನ್ನೆಲೆಯಲ್ಲಿ ಬ್ಯಾಂಕ್ ಗ್ರಾಹಕರು, ಠೇವಣಿದಾರರು ಇಕ್ಕಟ್ಟಿಗೆ ಸಿಲುಕುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.