ಎರಡನೇ ದಿನವೂ ಕುಸಿತ: ಮುಂಬಯಿ ಶೇರು 43 ಅಂಕ ನಷ್ಟ
Team Udayavani, May 30, 2018, 4:34 PM IST
ಮುಂಬಯಿ : ಎರಡನೇ ದಿನವೂ ಕುಸಿತದ ಹಾದಿಯನ್ನು ಹಿಡಿದಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 43 ಅಂಕಗಳ ನಷ್ಟದೊಂದಿಗೆ 34,906.11 ಅಂಕಗಳ ಮಟ್ಟದಲ್ಲಿ ಇಂದು ಬುಧವಾರದ ವಹಿವಾಟನ್ನು ಕೊನೆಗೊಳಿಸಿದೆ.
ಮೇ ತಿಂಗಳ ವಾಯಿದೆ ವಹಿವಾಟು ಈ ಗುರುವಾರ ಇತ್ಯರ್ಥವಾಗಲಿರುವ ನಡುವೆಯೇ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ದುರ್ಬಲ ಪ್ರವೃತ್ತಿ ತೋರಿ ಬಂದಿರುವುದು ಮುಂಬಯಿ ಶೇರು ಪೇಟೆಯ ಹಿನ್ನಡೆಗೆ ಕಾರಣವೆಂದು ತಿಳಿಯಲಾಗಿದೆ. ಕಳೆದ ಎರಡು ದಿನಗಳಲ್ಲಿ ಸೆನ್ಸೆಕ್ಸ್ ಒಟ್ಟು 216.24 ಅಂಕಗಳ ನಷ್ಟವನ್ನು ಅನುಭವಿಸಿದಂತಾಗಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 18.95 ಅಂಕಗಳ ನಷ್ಟಕ್ಕೆ ಗುರಿಯಾಗಿ ಇಂದು ಬುಧವಾರದ ವಹಿವಾಟನ್ನು 10,614.35 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ನಿನ್ನೆ ಮಂಗಳವಾರ ವಿದೇಶಿ ಹೂಡಿಕೆದಾರರು 407.33 ಕೋಟಿ ರೂ. ಶೇರುಗಳನ್ನು ಮಾರಿದ್ದರು; ವ್ಯತಿರಿಕ್ತವಾಗಿ ದೇಶೀಯ ಸಾಂಸ್ಥಿಕ ಹೂಡಿಕೆದಾರರು 578.38 ಕೋಟಿ ಶೇರುಗಳನ್ನು ಖರೀದಿಸಿದ್ದರು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,854 ಕಂಪೆನಿಗಳ ಶೇರು ವಹಿವಾಟಿಗೆ ಒಳಪಟ್ಟವು; 1,213 ಶೇರುಗಳು ಮುನ್ನಡೆ ಸಾಧಿಸಿದವು; 1,479 ಶೇರುಗಳು ಹಿನ್ನಡೆಗೆ ಗುರಿಯಾದವು; 162 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.