ಮುಂಬಯಿ ಶೇರು ಪೇಟೆಯಲ್ಲಿ ಅಮೋಘ ರಾಲಿ: 425 ಅಂಕಗಳ ಭರ್ಜರಿ ಏರಿಕೆ

Team Udayavani, Feb 17, 2017, 10:51 AM IST

Sensex-Rally-700.jpg

ಮುಂಬಯಿ : ಗಮನಾರ್ಹ ಪ್ರಮಾಣದಲ್ಲಿ  ವಿದೇಶೀ ಬಂಡವಾಳ ಹರಿದು ಬರುತ್ತಿರುವುದನ್ನು ಅನುಸರಿಸಿ ಹೊಸ ಹುರುಪು ಪಡೆದಿರುವ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 425 ಅಂಕಗಳ ಅಮೋಘ ರಾಲಿಯನ್ನು ದಾಖಲಿಸಿ 28,726.26 ಅಂಕಗಳ ಮಟ್ಟಕ್ಕೆ ಏರುವ ಮೂಲಕ ನಿರಂತರ ಎರಡನೇ ದಿನವೂ ಮುನ್ನುಗ್ಗಿದೆ.

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 91 ಅಂಕಗಳ ಅಮೋಘ ಜಿಗಿತವನ್ನು ಸಾಧಿಸಿ ದಿನದ ವಹಿವಾಟನ್ನು 8,869.60 ಅಂಕಗಳ ಮಟ್ಟದಲ್ಲಿ ಆರಂಭಿಸಿದೆ.

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌  ತನ್ನ ಆರಂಭಿಕ ಗಳಿಕೆಯನ್ನು ಬಹುಮಟ್ಟಿಗೆ ಬಿಟ್ಟುಕೊಟ್ಟು 170.61 ಅಂಕಗಳ ಏರಿಕೆಯೊಂದಿಗೆ 28,471.88 ಅಂಕಗಳ ಮಟ್ಟದಲ್ಲೂ, ನಿಫ್ಟಿ 39.60 ಅಂಕಗಳ ಏರಿಕೆಯೊಂದಿಗೆ 8,817.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಬ್ಯಾಂಕ್‌ ನಿಫ್ಟಿ ದಾಖಲೆಯ ಎತ್ತರವನ್ನು ಸಾಧಿಸಿತಾದರೆ ಇನ್‌ಫೋಸಿಸ್‌ ಶೇರು ಕುಸಿತಕ್ಕೆ ಗುರಿಯಾಯಿತು. ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರು ಶೇ.7.29ರ ಏರಿಕೆಯನ್ನು ದಾಖಲಿಸಿ ಅಚ್ಚರಿ ಉಂಟುಮಾಡಿತು. 

ಇಂದಿನ ಅಮೋಘ ಆರಂಭಿಕ ರಾಲಿಗೆ ಕಾರಣವಾದ ಶೇರುಗಳೆಂದರೆ ಎಚ್‌ ಡಿ ಎಫ್ ಸಿ, ಎಕ್ಸಿಸ್‌ ಬ್ಯಾಂಕ್‌, ಲೂಪಿನ್‌, ಪವರ್‌ ಗ್ರಿಡ್‌, ಅದಾನಿ ಪೋರ್ಟ್‌, ಟಾಟಾ ಮೋಟರ್‌, ಓಎನ್‌ಜಿಸಿ, ಸಿಪ್ಲಾ, ಭಾರ್ತಿ ಏರ್‌ಟೆಲ್‌ ಮತ್ತು ಲಾರ್ಸನ್‌ – ಇವು ಶೇ.1.64ರಷ್ಟು ಏರಿಕೆಯನ್ನು ದಾಖಲಿಸಿದವು. 

ಮುಂಬಯಿ ಶೇರು ಪೇಟೆಗೆ ವ್ಯತಿರಿಕ್ತವಾಗಿ ಇಂದು ಏಶ್ಯನ್‌ ಶೇರು ಪೇಟೆಗಳು ಹಿನ್ನಡೆಯನ್ನು ಕಂಡವು. ಜಪಾನಿನ ನಿಕ್ಕಿ ಶೇ.0.57 ಮತ್ತು ಹಾಂಗಾಂಗ್‌ನ ಹ್ಯಾಂಗ್‌ಸೆಂಗ್‌ ಶೇ.0.46 ಹಾಗೂ ಶಾಂಘೈ ಕಾಂಪೋಸಿಟ್‌ ಸೂಚ್ಯಂಕ ಶೇ.0.24ರ ಹಿನ್ನಡೆಗೆ ಗುರಿಯಾದವು. 

ಟಾಪ್ ನ್ಯೂಸ್

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.