ನಿರಂತರ ಐದನೇ ದಿನದ ಮುನ್ನಡೆ ಮುಂಬಯಿ ಶೇರು 103 ಅಂಕ ಏರಿಕೆ
Team Udayavani, Feb 22, 2017, 5:33 PM IST
ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರವೃತ್ತಿ ಕಂಡು ಬಂದಿರುವುದು ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಶೇರು ಮುನ್ನಡೆಯಲ್ಲಿ ಸಾಗಿರುವುದನ್ನು ಅನುಸರಿಸಿ, ನಿರಂತರ ಐದನೇ ದಿನದ ಮುನ್ನಡೆಯಾಗಿ, ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರ 103.12 ಅಂಕಗಳ ಏರಿಕೆಯನ್ನು ಸಾಧಿಸಿ ದಿನದ ವಹಿವಾಟನ್ನು 28,864.71 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 19.05 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 8,926.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ದಿನದ ವಹಿವಾಟಿನ ನಡುವೆ ರಿಲಯನ್ಸ್ ಶೇರು ಎಂಟು ವರ್ಷಗಳ ಗರಿಷ್ಠ ಮಟ್ಟದ ಎತ್ತರವನ್ನು ದಾಟಿ ಮುನ್ನಡೆದಿರುವುದು ಇಂದಿನ ಪ್ರಮುಖ ವಿದ್ಯಮಾನವೆನಿಸಿತು. ಆದರೆ ಐಟಿ, ಬ್ಯಾಂಕ್ ಮತ್ತು ಮೆಟಲ್ ರಂಗದ ಶೇರುಗಳು ಹಿನ್ನಡೆಗೆ ಗುರಿಯಾದವು.
ಬಿಎಸ್‌ಇ ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ಇಂದು ಶೇಕಡಾ 0.58ರಷ್ಟು ಕುಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.