2 ವರ್ಷಗಳ ಗರಿಷ್ಠ ಮಟ್ಟಕ್ಕೇರಿದ ಮುಂಬಯಿ ಶೇರು, 496 ಅಂಕ ಏರಿಕೆ
Team Udayavani, Mar 14, 2017, 4:12 PM IST
ಮುಂಬಯಿ : ಭಾರತೀಯ ಜನತಾ ಪಕ್ಷ ಈಚಿನ ಪಂಚ ರಾಜ್ಯ ಚುನಾವಣೆಗಳಲ್ಲಿ ಸಾಧಿಸಿದ ಪ್ರಚಂಡ ಜಯದ ಬಲದಲ್ಲಿ ಇಂದು ಮಂಗಳವಾರದ ವಹಿವಾಟನ್ನು 496 ಅಂಕಗಳ ಭರ್ಜರಿ ಏರಿಕೆಯೊಂದಿಗೆ ಮುಗಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, ಆ ಮೂಲಕ ಎರಡು ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿದೆ. ಇದೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,000 ಅಂಕಗಳ ಗಡಿಯನ್ನು ದಾಟಿ ವಿಜೃಂಭಿಸಿದೆ.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,684 ಶೇರುಗಳು ಮುನ್ನಡೆ ಸಾಧಿಸಿದರೆ 1,167 ಶೇರುಗಳು ಹಿನ್ನಡೆಗೆ ಗುರಿಯಾದವು; 198 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಸೆನ್ಸೆಕ್ಸ್ 496.40 ಅಂಕಗಳ ಏರಿಕೆಯೊಂದಿಗೆ 29,442.63 ಅಂಕಗಳ ಮಟ್ಟದಲ್ಲಿ ಹಾಗೂ ನಿಫ್ಟಿ 140.25 ಅಂಕಗಳ ಏರಿಕೆಯೊಂದಿಗೆ 9,074.80 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಮುಗಿಸಿದವು.
ಇಂಟೆರಿಮ್ ಡಿವಿಡೆಂಡ್ ಘೋಷಣೆಯನ್ನು ಅನುಸರಿಸಿ ಶೇ.7ರಷ್ಟು ಕುಸಿದ ಕೋಲ್ ಇಂಡಿಯಾ ಶೇರು ಆ ಮೂಲಕ ತನ್ನ ಧಾರಣೆಯನ್ನು ಸರಿದೂಗಿಸಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
MUST WATCH
ಹೊಸ ಸೇರ್ಪಡೆ
Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ
Belthangady: ವಾರದ ಹಿಂದೆ ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ವಿವಾಹ
ಇಂದು ಜೆಡಿಎಸ್ ಸಭೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಒತ್ತು
Support Price: ಬೆಂಬಲ ಬೆಲೆ ಘೋಷಿಸದಿದ್ರೆ ರೈತ ಸಂಪರ್ಕ ಕೇಂದ್ರಕ್ಕೆ ಬೀಗ: ಆರ್.ಅಶೋಕ್
Puttur: ಅಂತಾರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.