ಐಟಿ, ಪ್ಯಾನ್‌ಗೆ ಆಧಾರ್ ಕಡ್ಡಾಯದಲ್ಲಿ ತಪ್ಪೇನೂ ಇಲ್ಲ: ನಿಲೇಕಣಿ
Team Udayavani, Mar 23, 2017, 7:28 PM IST
ಹೊಸದಿಲ್ಲಿ : ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದಕ್ಕೆ ಮತ್ತು ಪ್ಯಾನ್ ಕಾರ್ಡ್ ಪಡೆಯುವುದಕ್ಕೆ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿರುವ ಸರಕಾರದ ಪ್ರಸ್ತಾವವನ್ನು ಸ್ವಾಗತಿಸಿರುವ ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಇದರ ಪ್ರಥಮ ಅಧ್ಯಕ್ಷ ನಂದನ್ ನಿಲೇಕಣಿ ಅವರು “ಸರಕಾರದ ಕ್ರಮ ಅತ್ಯಂತ ಸಮರ್ಪಕವಾಗಿದೆ; ಐಟಿ ರಿಟರ್ನ್ ಮತ್ತು ಪ್ಯಾನ್‌ಗೆ ಆಧಾರ್ ಕಡ್ಡಾಯ ಮಾಡುವುದರಲ್ಲಿ ತಪ್ಪೇನೂ ಇಲ್ಲ’ ಎಂದು ಹೇಳಿದ್ದಾರೆ.
“ಒಬ್ಬನೇ ವ್ಯಕ್ತಿ ಹಲವು ಪ್ಯಾನ್ ಕಾರ್ಡ್ ಹೊಂದಿರುವುದನ್ನು ಸುಲಭದಲ್ಲಿ ಪತ್ತೆ ಹಚ್ಚಿ ಅಂತಹ ಪ್ಯಾನ್ ಕಾರ್ಡ್‌ಗಳನ್ನು ರದ್ದು ಪಡಿಸಲು ಸರಕಾರದ ಈ ಕ್ರಮದ ಮೂಲಕ ಸಾಧ್ಯವಾಗುತ್ತದೆ; ಅಲ್ಲದೆ ಆಧಾರ್ ಜೋಡಿಸಲ್ಪಟ್ಟ ಪ್ಯಾನ್ ಕಾರ್ಡ್ ನಂಬರ್ ಅನನ್ಯವಾಗಿರಲು ಸಾಧ್ಯವಾಗುತ್ತದೆ’ ಎಂದು 61ರ ಹರೆಯದ ನಿಲೇಕಣಿ ಹೇಳಿದ್ದಾರೆ.
ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದಕ್ಕೆ ಮತ್ತು ಪ್ಯಾನ್ ಕಾರ್ಡ್ ಪಡೆಯುವುದಕ್ಕೆ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸುವ ವಿವಾದಾತ್ಮಕ ಮಸೂದೆಯನ್ನು ಸರಕಾರ ಸಂಸತ್ತಿನಲ್ಲಿ ಮಂಡಿಸಿರುವ ಹಿನ್ನೆಲೆಯಲ್ಲಿ ನಿಲೇಕಣಿ ಅವರು ಈ ಹೇಳಿಕೆ ನೀಡಿದ್ದಾರೆ.
ಲೋಕಸಭೆಯಲ್ಲಿ ಮಾತನಾಡುತ್ತಾ ವಿತ್ತ ಸಚಿವ ಅರುಣ್ ಜೇತ್ಲಿ ಅವರು “ಸದ್ಯೋಭವಿಷ್ಯದಲ್ಲಿ ಆಧಾರ್ ಕಾರ್ಡ್ ಮಾತ್ರವೇ ಎಲ್ಲ ಜನರ ವಿಶಿಷ್ಟ ಗುರುತಿನ ಕಾರ್ಡ್ ಆಗಲಿದೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.