50,000 ಮೀರುವ ಆಭರಣ ಖರೀದಿಗೆ ಪಾನ್ ಕಾರ್ಡ್ ಬೇಡ
Team Udayavani, Oct 6, 2017, 7:49 PM IST
ಹೊಸದಿಲ್ಲಿ : 50,000 ರೂ. ಮೀರುವ ಚಿನ್ನಾಭರಣ ಖರೀದಿಗೆ ಇನ್ನು ಮುಂದೆ ಪಾನ್ ಕಾರ್ಡ್ ಕಡ್ಡಾಯವಲ್ಲ.
ಕೇಂದ್ರ ಸರಕಾರ ಇಂದು ಶುಕ್ರವಾರ ವಜ್ರ ಮತ್ತು ಚಿನ್ನಾಭರಣ ಖರೀದಿ ಮೇಲಿನ ಜಿಎಸ್‌ಟಿ ಅಧಿಸೂಚನೆಯನ್ನು ಹಿಂಪಡೆದಿರುವುದೇ ಇದಕ್ಕೆ ಕಾರಣವಾಗಿದೆ. ಇಂದು ನಡೆದಿದ್ದ ಜಿಎಸ್‌ಟಿ ಮಂಡಳಿಯ ನಿರ್ಣಾಯಕ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಚಿನ್ನಾಭರಣ ವ್ಯಾಪಾರಿಗಳಿಗೆ ಇನ್ನಷ್ಟು ನೆಮ್ಮದಿ ಕೊಡುವ ನಿಟ್ಟಿನಲ್ಲಿ ಸರಕಾರ “ಎರಡು ಕೋಟಿ ಅಥವಾ ಅದಕ್ಕೂ ಮೀರಿದ ವಾರ್ಷಿಕ ವಹಿವಾಟು ನಡೆಸುವ, ವಜ್ರ, ಚಿನ್ನಾಭರಣ ಸಹಿತ ಅತ್ಯಧಿಕ ಮೌಲ್ಯದ ಸರಕುಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ಸಂಸ್ಥೆಗಳು ಪಿಎಂಎಲ್‌ಎ ಅಡಿ ಬರುವುದಿಲ್ಲ ಎಂದು ಹೇಳಿದೆ.
ಮಾತ್ರವಲ್ಲದೆ 50,000 ರೂ. ಮೀರುವ ವಜ್ರ ಮತ್ತು ಚಿನ್ನಾಭರಣ ಖರೀದಿಯ ವಹಿವಾಟುಗಳನ್ನು ಸರಕಾರಕ್ಕೆ ತಿಳಿಸಬೇಕಾಗಿಲ್ಲ ಎಂಬುದನ್ನೂ ಸ್ಪಷ್ಟಪಡಿಸಲಾಗಿದೆ. ಹಾಗಾಗಿ ಚಿನ್ನ ಮತ್ತು ವಜ್ರಾಭರಣ ಮಾರಾಟಗಾರರು ಇನ್ನು ಮಂದೆ 50,000 ರೂ. ಮೀರುವ ಖರೀದಿ ವ್ಯವಹಾರಗಳನ್ನು ಹಣಕಾಸು ಗುಪ್ತಚರ ದಳಕ್ಕೆ ತಿಳಿಸಬೇಕಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.