ಎಲ್ಲೆಲ್ಲಿ ಎಷ್ಟು ಹೆಚ್ಚಳ? ಬೆಂಗಳೂರು, ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗರಿಷ್ಠ ಏರಿಕೆ
ಪೆಟ್ರೋಲ್ ಪ್ರತಿ ಲೀಟರ್ ಗೆ 2.34 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ ಬೆಲೆ 2.36 ರೂಪಾಯಿ ಹೆಚ್ಚಳ
Team Udayavani, Jan 27, 2021, 10:45 AM IST
ನವದೆಹಲಿ: ತೈಲ ಮಾರುಕಟ್ಟೆ ಬೆಲೆ ಏರಿಸಿದ್ದರ ಪರಿಣಾಮ ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಬುಧವಾರವೂ(ಜನವರಿ 27, 2021) ಏರಿಕೆಯಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅಧಿಕಾರಕ್ಕಾಗಿ ಕಾಂಗ್ರೆಸ್ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ: ನಳೀನ್ ಕುಮಾರ್ ಕಟೀಲ್ ಆಕ್ರೋಶ
ತೈಲ ಮಾರುಕಟ್ಟೆಯ ಬೆಲೆ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಇಂದು 26 ಪೈಸೆಗಳಷ್ಟು ಹೆಚ್ಚಳವಾಗುವ ಮೂಲಕ ಪೆಟ್ರೋಲ್ ಪ್ರತಿ ಲೀಟರ್ ಬೆಲೆ 89.21 ಪೈಸೆ ಏರಿಕೆಯಾಗಿದ್ದು, ಇದರೊಂದಿಗೆ 90 ರೂಪಾಯಿ ಸಮೀಪಕ್ಕೆ ಬಂದಿರುವುದಾಗಿ ವರದಿ ಹೇಳಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 25 ಪೈಸೆ ಏರಿಕೆ ಆಗಿದ್ದು, ಲೀಟರ್ ಗೆ 86.30 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ 25 ಪೈಸೆ ಏರಿಕೆಯಾಗುವ ಮೂಲಕ ಪ್ರತಿ ಲೀಟರ್ ಗೆ 76.48 ರೂಪಾಯಿಗೆ ಮುಟ್ಟಿದೆ. ಮಂಗಳವಾರ ಪ್ರತಿ ಲೀಟರ್ ಡೀಸೆಲ್ ಬೆಲೆ 76.23 ರೂಪಾಯಿಗೆ ಏರಿಕೆಯಾಗಿತ್ತು.
ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 92.86 ರೂಪಾಯಿಗೆ ಏರಿಕೆಯಾಗುವ ಮೂಲಕ ದಾಖಲೆ ಹೆಚ್ಚಳ ಕಂಡಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆ 83.30 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಚೆನ್ನೈನಲ್ಲಿ ಪೆಟ್ರೋಲ್ ಲೀಟರ್ ಗೆ 88.82 ರೂಪಾಯಿ ತಲುಪಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 81.71 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 87.69 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಗೆ 80.08 ರೂಪಾಯಿಗೆ ಹೆಚ್ಚಳವಾಗಿದೆ.
ರಾಜ್ಯ ಸ್ವಾಮಿತ್ವದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೋರೇಶನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ಜನವರಿ 6ರಿಂದ ಬೆಲೆ ಹೆಚ್ಚಳ ಆರಂಭಿಸಿದ್ದು, ಇದರ ಪರಿಣಾಮ ಪೆಟ್ರೋಲ್ ಪ್ರತಿ ಲೀಟರ್ ಗೆ 2.34 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ ಬೆಲೆ 2.36 ರೂಪಾಯಿ ಹೆಚ್ಚಳ ಕಂಡಂತಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.