ಲಾಭನಗದೀಕರಣದ ಒತ್ತಡಕ್ಕೆ ಮುಗ್ಗರಿಸಿದ ಸೆನ್ಸೆಕ್ಸ್ ; 383 ಅಂಕ ಕುಸಿತ
Team Udayavani, Oct 17, 2018, 4:55 PM IST
ಮುಂಬಯಿ : ನಿರಂತರ ನಾಲ್ಕನೇ ದಿನವಾಗಿ ಬೆಳಗ್ಗಿನ ವಹಿವಾಟಿನಲ್ಲಿ ಉತ್ತಮ ಏರುಗತಿಯನ್ನು ಕಾಯ್ದುಕೊಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟಿನಲ್ಲಿ ಲಾಭ ನಗದೀಕರಣದ ಕಾರಣ 382.90 ಅಂಕಗಳ ನಷ್ಟಕ್ಕೆ ಗುರಿಯಾಗಿ 34,779.58 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 131.70 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,453.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಕಳೆದ ಮೂರು ದಿನಗಳ ಏರುಗತಿಯಲ್ಲಿ ಸೆನ್ಸೆಕ್ಸ್ ಒಟ್ಟು 1,161 ಅಂಕಗಳನ್ನು ಗಳಿಸಿತ್ತು. ಎರಡನೇ ತ್ತೈಮಾಸಿಕದಲ್ಲಿ ಇನ್ಫೋಸಿಸ್ ಉತ್ತಮ ಫಲಿತಾಂಶವನ್ನು ದಾಖಲಿಸಿದ ನೆಲೆಯಲ್ಲಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ಗರಿಗೆದರಿತ್ತು. ಆದರೆ ಮಧ್ಯಾಹ್ನದ ಬಳಿಕ ಲಾಭನಗದೀಕರಣದ ಶೇರು ಮಾರಾಟ ನಡೆದು ಸೆನ್ಸೆಕ್ಸ್ ಕುಸಿತವನ್ನು ಕಂಡಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,745 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 705 ಶೇರುಗಳು ಮುನ್ನಡೆ ಕಂಡವು; 1,904 ಶೇರುಗಳು ಹಿನ್ನಡೆಗೆ ಗುರಿಯಾದವು; 136 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.