ಲಾಭ ನಗದೀಕರಣ : ಮುಂಬಯಿ ಶೇರು ಪೇಟೆಗೆ 35 ಅಂಕ ನಷ್ಟ
Team Udayavani, Jan 30, 2017, 11:51 AM IST
ಮುಂಬಯಿ : ಹೂಡಿಕೆದಾರರು ಹಾಗೂ ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಪ್ರಯುಕ್ತ ಇಂದು ಸೋಮವಾರದ ವಹಿವಾಟನ್ನು 35 ಅಂಕಗಳ ಕುಸಿತದೊಂದಿಗೆ ಆರಂಭಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್, ಮಧ್ಯಾಹ್ನ 12 ಗಂಟೆಯ ಸುಮಾರಿಗೆ ತನ್ನ ನಷ್ಟವನ್ನು 10 ಅಂಕಗಳಿಗೆ ಇಳಿಸಿಕೊಂಡು 27,872.21 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 5.95 ಅಂಕಗಳ ನಷ್ಟಕ್ಕೆ ಗುರಿಯಾಗಿ ಮಧ್ಯಾಹ್ನದ ವೇಳೆಗೆ 8,635.30 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಕೇಂದ್ರ ಬಜೆಟ್ ಮಂಡನೆಯ ದಿನ ಸಮೀಪಿಸುತ್ತಿರುವಂತೆಯೆ ಎಚ್ಚರಿಕೆಯ ನಡೆ ತೋರುತ್ತಿರುವ ಮುಂಬಯಿ ಶೇರು ಪೇಟೆಯನ್ನು ಇಂದು ಐಟಿ ಶೇರುಗಳು ಕೆಳಕ್ಕೆ ಎಳೆದವು. ಮೇಲಾಗಿ ಏಶ್ಯನ್ ಶೇರು ಪೇಟೆಗಳಲ್ಲಿ ತೋರಿ ಬಂದ ದೌರ್ಬಲ್ಯ ಕೂಡ ಸೆನ್ಸೆಕ್ಸ್, ನಿಫ್ಟಿ ಕುಸಿತಕ್ಕೆ ಕಾರಣವಾದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಜಪಾನಿನ ನಿಕ್ಕಿ ಶೇ.0.74ರ ನಷ್ಟಕ್ಕೆ ಗುರಿಯಾಯಿತು. ಆದರೆ ಶಾಂಘೈ ಸೂಚ್ಯಂಕ ಶೇ.0.31ರ ಏರಿಕೆಯನ್ನು ಕಂಡಿತು. ಹಾಂಕಾಂಗ್ ಶೇರು ಮಾರುಕಟ್ಟೆ ಇಂದು ಸಾರ್ವಜನಿಕ ರಜೆಯ ಪ್ರಯುಕ್ತ ಮುಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.