ನೋ ರಿಲೀಫ್, RBI ಅಚ್ಚರಿ: ರೆಪೋ ಸಹಿತ ಎಲ್ಲ ದರ ಯಥಾಸ್ಥಿತಿ
Team Udayavani, Feb 8, 2017, 3:11 PM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರಂತರ ಎರಡನೇ ಬಾರಿಗೆ ತನ್ನ ಹಣಕಾಸು ನೀತಿ ಪರಾಮರ್ಶೆಯಲ್ಲಿ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡದೇ ಶೇ.6.25ರ ರಿಪೋ ರೇಟ್ ಜತೆಗೆ ಉಳಿದೆಲ್ಲ ದರಗಳನ್ನು ಯಥಾವತ್ತಾಗಿ ಉಳಿಸಿಕೊಂಡಿದೆ.
ಆರ್‌ಬಿಐ ನ ಈ ಕ್ರಮದಿಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 180 ಅಂಕಗಳಷ್ಟು ಕುಸಿದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ 65.36 ಅಂಕಗಳ ನಷ್ಟದಲ್ಲಿ 28273.28 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಹಣಕಾಸು ವಲಯದಲ್ಲಿ ಆರ್ ಬಿ ಐ ಶೇ.0.25ರ ಪ್ರಮಾಣದಲ್ಲಿ ಬಡ್ಡಿದರ ಕಡಿತ ಮಾಡುವುದೆಂಬ ವಿಶ್ವಾಸ ನೆಲೆಸಿತ್ತು.
ಶೇ.6.25ರ ರಿಪೋ ರೇಟ್ ಮಾತ್ರವಲ್ಲದೆ, ಇತರ ದರಗಳಾದ ರಿವರ್ಸ್ ರಿಪೋ ರೇಟ್, ಮಾರ್ಜಿನಲ್ ಸ್ಟಾಂಡಿಂಗ್ ಫೆಸಿಲಿಟಿ ರೇಟ್ ಮತ್ತು ಬ್ಯಾಂಕ್ ರೇಟ್ – ಇವೆಲ್ಲವನ್ನೂ ಆರ್‌ಬಿಐ ಈ ವರೆಗಿನ ದರದಲ್ಲೇ ಉಳಿಸಿಕೊಂಡಿರುವುದು ಹಣಕಾಸು ಮಾರುಕಟ್ಟೆಯ ಅಚ್ಚರಿಗೆ ಕಾರಣವಾಗಿದೆ.
ಈ ಎಲ್ಲ ದರಗಳನ್ನು ಯಥಾವತ್ ಸ್ಥಿತಿಯಲ್ಲೇ ಉಳಿಸಿಕೊಳ್ಳುವುದಕ್ಕೆ ಆರ್ ಬಿ ಐನ ಹಣಕಾಸು ನೀತಿ ಪರಾಮರ್ಶೆ ಸಮಿತಿ ಎಂಪಿಸಿ ಯ ಎಲ್ಲ ಆರು ಸದಸ್ಯರು ಸರ್ವಾನುಮತದಿಂದ ತೀರ್ಮಾನಿಸಿದರು.
ಕಳೆದ ವರ್ಷ ನವೆಂಬರ್ 8ರಂದು ಕೇಂದ್ರ ಸರಕಾರ ಅತ್ಯಂತ ಆಘಾತಕಾರಿ ಕ್ರಮದಲ್ಲಿ 500 ರೂ. ಹಾಗೂ 1,000 ರೂ. ನೋಟುಗಳನ್ನು ನಿಷೇಧಿಸಿದ ಬಳಿಕದಲ್ಲಿ ನಿಧಾನಗೊಂಡ ದೇಶದ ಆರ್ಥಿಕಾಭಿವೃದ್ಧಿ ಹಾಗೂ ಬ್ಯಾಂಕುಗಳಿಗೆ ಹರಿದು ಬಂದ ಅಪಾರ ಪ್ರಮಾಣದ ಕಡಿಮೆ ವೆಚ್ಚದ ಠೇವಣಿಗಳಿಂದಾಗಿ ಆರ್‌ಬಿಐ ಈ ಬಾರಿ ತನ್ನ ಬಡ್ಡಿ ದರಗಳನ್ನು, ಆರ್ಥಿಕ ಅಭಿವೃದ್ಧಿಗೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ, ಕಡಿತಗೊಳಿಸುವುದೆಂದು ವ್ಯಾಪಕವಾಗಿ ಭಾವಿಸಲಾಗಿತ್ತು.
ಕಳೆದ ವರ್ಷ ನವೆಂಬರ್ – ತಿಂಗಳಲ್ಲಿ ಗ್ರಾಹಕ ಹಣದುಬ್ಬರ ಪ್ರಮಾಣ ಕೂಡ ನಿಯಂತ್ರಣದಲ್ಲಿದ್ದುದು ಇದಕ್ಕೆ ಪೂರಕವಾಗಿತ್ತು. ಆದರೆ ಇಂದಿನ ಆರ್‌ಬಿಐ ನಡೆ ಅಚ್ಚರಿದಾಯಕವೆನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.