ಕಾರ್ಡ್‌ ಪಾವತಿ: ಬ್ಯಾಂಕ್‌ ವ್ಯವಹಾರ ಶುಲ್ಕ ಇಳಿಸಲು ಆರ್‌ಬಿಐ ಕ್ರಮ


Team Udayavani, Feb 4, 2017, 3:35 PM IST

Bank new note-700.jpg

ಹೊಸದಿಲ್ಲಿ : ದೇಶದಲ್ಲಿ ನಗದು ರಹಿತ ವ್ಯವಹಾರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌, ಸೇವಾ ಶುಲ್ಕವನ್ನು ನಿರ್ಧರಿಸುವ ಸ್ವಾತಂತ್ರ್ಯವನ್ನು ಬ್ಯಾಂಕುಗಳಿಗೆ ನೀಡಿರುವುದಾಗಿ ಹಣಕಾಸು ವ್ಯವಹಾರಗಳ ಕೇಂದ್ರ ಸಹಾಯಕ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್‌ ಹೇಳಿದ್ದಾರೆ. ಅಂತೆಯೇ ಕ್ರೆಡಿಟ್‌ ಕಾರ್ಡ್‌ ಮೇಲಿನ ಬಡ್ಡಿದರವನ್ನು ಇಳಿಸಲು ಆರ್‌ ಬಿ ಐ ಉದ್ದೇಶಿಸಿದೆ ಎಂದವರು ಹೇಳಿದ್ದಾರೆ. 

ಕ್ರೆಡಿಟ್‌ ಕಾರ್ಡ್‌ ಪಾವತಿ ಬಾಕಿಗೆ ವಿಧಿಸಲಾಗುವ ಬಡ್ಡಿ ದರದ ಮೇಲಿನ ನಿಯಂತ್ರಣವನ್ನು ಆರ್‌ಬಿಐ ಬಿಟ್ಟುಕೊಟ್ಟಿದೆ. ಆರ್‌ಬಿಐ ಕಾಲಕಾಲಕ್ಕೆ ಬಡ್ಡಿ ಕುರಿತಾಗಿ ನೀಡುವ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಆಯಾ ಬ್ಯಾಂಕುಗಳ ನಿರ್ದೇಶಕ ಮಂಡಳಿಯು ನೀಡುವ ಒಪ್ಪಿಗೆಯ ಪ್ರಕಾರ ಬಡ್ಡಿ ದರಗಳನ್ನು ನಿರ್ಧರಿಸಲಾಗುತ್ತದೆ. ಆರ್‌ಬಿಐ ಈ ಸಂಬಂಧ ಕಮಿಷನ್‌ ದರ ಕುರಿತಾದ ಯಾವುದೇ ಮಾಹಿತಿಗಳನ್ನು ಇರಿಸಿಕೊಳ್ಳುವುದಿಲ್ಲ.

ಆಧಾರ್‌ ಕಾರ್ಡ್‌ ಆಧರಿಸಿಕೊಂಡು ವ್ಯಾಪಾರಿಗಳಿಗೆ ಮಾಡಲಾಗುವ ಪಾವತಿಯ ಮೇಲೆ ಶೇ.0.5 ರ ಪ್ರೋತ್ಸಾಹನೆಯನ್ನು ನೀಡುವುದಕ್ಕೆ ನಬಾರ್ಡ್‌ ಸಮ್ಮತಿಸಿದೆ.

ಪಿಓಎಸ್‌ ಮಶೀನ್‌ಗಳ ಮೂಲಕ ನಡೆಯುವ ಡೆಬಿಟ್‌ ಕಾರ್ಡ್‌ ವ್ಯವಹಾರಗಳಿಗೆ ಸಂಬಂಧಿಸಿದಂತೆ 2017ರ ಜನವರಿ 1ರಿಂದ ಮಾರ್ಚ್‌  31ರ ವರೆಗಿನ ಅವಧಿಯ ತನಕ 1,000 ರೂ. ವರೆಗಿನ ಪಾವತಿಗೆ ಶೇ.0.25, ಮತ್ತು 1,000 ರೂ.ಗಳಿಂದ 2,000 ರೂ. ವರೆಗಿನ ವ್ಯವಹಾರಗಳಿಗೆ ಶೇ.0.50 ಎಂಡಿಆರ್‌ ನೀಡಲಾಗುವುದು. 

2017ರ ಮಾರ್ಚ್‌ 31ರ ವರೆಗೆ ಐಎಂಪಿಎಸ್‌, ಯುಎಸ್‌ಎಸ್‌ಡಿ ಮತುತ ಯುಪಿಐ ಮೂಲಕ ಗ್ರಾಹಕರು ಮಾಡುವ 1,000 ರೂ. ವರೆಗಿನ ಪಾವತಿ ವ್ಯವಹಾರಗಳಿಗೆ ಯಾವುದೇ ಶುಲ್ಕ ವಿಧಿಸಕೂಡದೆಂದು ಆರ್‌ ಬಿ ಐ ಸೂಚಿಸಿದೆ. 

ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಚಾರ್ಜ್‌ ಕಾರ್ಡ್‌ ಮತ್ತು ಇತರ ಬಗೆಯ ಪಾವತಿ ಕಾರ್ಡ್‌ಗಳನ್ನು ಬಳಸಿಕೊಂಡು ಮಾಡಲಾಗುವ 2,000 ರೂ.ಗಳ ವರೆಗಿನ ವ್ಯವಹಾರಗಳ ಮೇಲಿನ ಯಾವುದೇ ರೀತಿಯ ಬ್ಯಾಂಕ್‌ ಸೇವಾ ಶುಲ್ಕಕ್ಕೆ ವಿನಾಯಿತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಪ್ರೋತ್ಸಾಹನ ನೀಡಲು ಸರಕಾರ ಲಕ್ಕಿ ಗ್ರಾಹಕ ಯೋಜನೆ, ವ್ಯಾಪಾರಿಗಳಿಗೆ ಡಿಜಿ ಧನ ಯೋಜನೆಯನ್ನು ಆರಂಭಿಸಿದೆ. 

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.