ಎಸ್‌ಬಿಐ ಲಾಭ 6 ಪಟ್ಟು ಹೆಚ್ಚಳ
Team Udayavani, Oct 26, 2019, 5:32 AM IST
ಹೊಸದಿಲ್ಲಿ: ಸೆಪ್ಟಂಬರ್‌ಗೆ ಅಂತ್ಯಗೊಂಡ ತ್ತೈಮಾಸಿಕ ಅವಧಿಯಲ್ಲಿ ಎಸ್‌ಬಿಐ ನಿವ್ವಳ ಲಾಭ 6 ಪಟ್ಟು ಹೆಚ್ಚಳವಾಗಿದ್ದು, 3,375.40 ಕೋಟಿ ರೂ. ಲಾಭವಾಗಿರುವುದಾಗಿ ಬ್ಯಾಂಕ್ ಘೋಷಿಸಿದೆ. ಬ್ಯಾಂಕಿನ ಜೀವವಿಮೆ ಕಂಪೆನಿಯ ಭಾಗಶಃ ಷೇರುಗಳನ್ನು ಮಾರಾಟ ಮಾಡಿದ ಪರಿಣಾಮ ಈ ಮಟ್ಟದ ಲಾಭ ಆಗಿದೆ ಎಂದು ಹೇಳಲಾಗಿದೆ. ಹಿಂದಿನ ವಿತ್ತೀಯ ವರ್ಷದ ಜುಲೈ-ಸೆಪೆrಂಬರ್ ಅವಧಿಯಲ್ಲಿ ಬ್ಯಾಂಕ್ 576.46 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಕಳೆದ ವರ್ಷದ ಈ ತ್ತೈಮಾಸಿಕದಲ್ಲಿ ಬ್ಯಾಂಕ್ ಕ್ರೋಢೀಕೃತ ಒಟ್ಟು ಆದಾಯವು 79,302.72 ಕೋಟಿ ರೂ. ಆಗಿತ್ತು. ಅದು ಈ ಬಾರಿ 89,347.91 ಕೋಟಿ ರೂ. ಆಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಬ್ಯಾಂಕ್ ತನ್ನ ಎಸ್‌ಬಿಐ ಲೈಫ್ ಇನ್ಶೂರೆನ್ಸ್‌ನ ಶೇ.4.5 ಷೇರುಗಳನ್ನು ಮಾರಾಟ ಮಾಡಿತ್ತು. ಇದರಿಂದಲೇ ಬ್ಯಾಂಕಿಗೆ 3,190.97 ಕೋಟಿ ರೂ. ಲಾಭ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.