178 ಅಂಕ ಜಿಗಿದ ಮಂಬಯಿ ಶೇರು, 11,600 ಗಡಿ ದಾಟಿದ ನಿಫ್ಟಿ
Team Udayavani, Apr 5, 2019, 4:48 PM IST
ಮುಂಬಯಿ : ಅಮೆರಿಕ – ಚೀನ ವಾಣಿಜ್ಯ ವಹಿವಾಟು ಮಾತುಕತೆ ಫಲಪ್ರದವಾದೀತೆಂಬ ಆಶಾವಾದದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಧನಾತ್ಮಕತೆ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 177.51 ಅಂಕಗಳ ಉತ್ತಮ ಜಿಗಿತದೊಂದಿಗೆ 38,862.23 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 67.95 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 11,665.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್ ಶೇರು ಶೇ.3.36ರ ಜಿಗಿತವನ್ನು ಕಂಡು ಟಾಪ್ ಗೇನರ್ ಎನಿಸಿಕೊಂಡಿತು. ಇದನ್ನು ಅನುಸರಿಸಿದ ವೇದಾಂತ, ಬಜಾಜ್ ಫಿನಾನ್ಸ್, ಟಿಸಿಎಸ್, ಇಂಡಸ್ ಇಂಡ್ ಬ್ಯಾಂಕ್, ಇನ್ಫೋಸಿಸ್, ಒಎನ್ಜಿಸಿ, ಕೋಟಕ್ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್, ಮಹೀಂದ್ರ, ಐಟಿಸಿ ಶೇರುಗಳು ಉತ್ತಮ ಏರಿಕೆ ಕಂಡವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,738 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,506 ಶೇರುಗಳು ಮುನ್ನಡೆ ಸಾಧಿಸಿದವು; 1,066 ಶೇರುಗಳು ಹಿನ್ನಡೆಗೆ ಗುರಿಯಾದವು; 166 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.