ನಾಲ್ಕು ದಿನಗಳ ಸೋಲಿಗೆ ಬ್ರೇಕ್: ಸೆನ್ಸೆಕ್ಸ್ 150 ಅಂಕ ಜಿಗಿತ
Team Udayavani, Feb 13, 2019, 6:28 AM IST
ಮುಂಬಯಿ : ನಾಲ್ಕು ದಿನಗಳಿಂದ ನಿರಂತರ ಸೋಲಿನ ಹಾದಿಯಲ್ಲಿ ಸಾಗಿ ಬಂದಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ದಾಖಲಿಸಿತು.
ದೇಶದಲ್ಲಿನ ಹಣದುಬ್ಬರ ಕಡಿಮೆಯಾಗಿರುವುದು, ಆರ್ಥಿಕಾಭಿವೃದ್ಧಿ ಅಂಕಿ ಅಂಶಗಳು ಧನಾತ್ಮಕವಾಗಿರುವುದು, ಬ್ಲೂ ಚಿಪ್ ಕಂಪೆನಿಗಳ ತ್ತೈಮಾಸಿಕ ಫಲಿತಾಂಶಗಳು ಆಶಾದಾಯಕವಾಗಿರುವುದು – ಇವೇ ಮೊದಲಾದ ಕಾರಣಗಳಿಗೆ ಇಂದು ಮುಂಬಯಿ ಶೇರು ಪೇಟೆಯಲ್ಲಿ ತೇಜಿಯ ವಾತಾವರಣ ಕಂಡುಬಂತು.
ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸೆನ್ಸೆಕ್ಸ್ 93.77 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,247.39 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 25.00 ಅಂಕಗಳ ಮುನ್ನಡೆಯೊಂದಿಗೆ 10,856.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರಿನ ಆರಂಭಿಕ ವಹಿವಾಟಿನಲ್ಲಿಂದು ರೂಪಾಯಿ 26 ಪೈಸೆಗಳ ಉತ್ತಮ ಜಿಗಿತವನ್ನು ಸಾಧಿಸಿ 70.44 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.