ಮುಂಬಯಿ ಶೇರು ದಾಖಲೆಯ ಎತ್ತರಕ್ಕೆ; 11,000 ಮೀರಿದ ನಿಫ್ಟಿ
Team Udayavani, Jul 18, 2018, 11:00 AM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ಜಿಗಿತವನ್ನು ದಾಖಲಿಸಿ ಹೊಸ ದಾಖಲೆಯ ಎತ್ತರದ 36,747.87 ಅಂಕಗಳ ಮಟ್ಟವನ್ನು ತಲುಪಿತು.
ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯಲ್ಲಿನ ಗಮನಾರ್ಹ ಇಳಿಕೆಯ ಕಾರಣ ಇಂದು ತೈಲ, ಅನಿಲ, ಬ್ಯಾಂಕಿಂಗ್, ಪಿಎಸ್‌ಯು ಮತ್ತು ರಿಯಲ್ಟಿ ಕ್ಷೇತ್ರದ ಶೇರುಗಳು ಉತ್ತಮ ಖರೀದಿಯನ್ನು ಕಂಡವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 12 ಪೈಸೆಯಷ್ಟು ಏರುವ ಮೂಲಕ 68.33 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಯಿತು.
ಜುಲೈ 13ರಂದು ಸೆನ್ಸೆಕ್ಸ್ 36,740.07 ಅಂಕಗಳ ದಾಖಲೆಯ ಮಟ್ಟವನ್ನು ತಲುಪಿತ್ತು. ಇಂದಿನ ವಹಿವಾಟಿನಲ್ಲಿ ಅದು 36,747.87 ಅಂಕಗಳ ಮಟ್ಟವನ್ನು ತಲುಪುವ ಮೂಲಕ ಹೊಸ ಎತ್ತರದ ದಾಖಲೆಯನ್ನು ರೂಪಿಸಿತು. ಸೆನ್ಸೆಕ್ಸ್ ಕಳೆದೆರಡು ದಿನಗಳ ವಹಿವಾಟಿನಲ್ಲಿ 196.19 ಅಂಕಗಳನ್ನು ಸಂಪಾದಿಸಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲಿ 62.05 ಅಂಕಗಳ ಏರಿಕೆಯನ್ನು ದಾಖಲಿಸಿ 11,070.10 ಅಂಕಗಳ ಮಟ್ಟವನ್ನು ತಲುಪಿತು.
ದೇಶೀಯ ಹೂಡಿಕೆದಾರ ಸಂಸ್ಥೆಗಳು ನಿನ್ನೆ ಮಂಗಳವಾರ 840.06 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದವು; ವಿದೇಶಿ ಹೂಡಿಕೆದಾರ ಸಂಸ್ಥೆಗಳು 673.99 ಕೋಟಿ ರೂ. ಶೇರುಗಳನ್ನು ಮಾರಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಅದಾನಿ ಪೋರ್ಟ್, ಎಚ್ ಡಿ ಎಫ್ ಸಿ ಬ್ಯಾಂಕ್, ಸನ್ ಫಾರ್ಮಾ, ಒಎನ್‌ಜಿಸಿ, ಕೋಲ್ ಇಂಡಿಯಾ, ಹೀರೋ ಮೋಟೋಕಾರ್ಪ್, ಮಾರುತಿ ಸುಜುಕಿ, ಇನ್‌ಫೋಸಿಸ್, ಪವರ್ ಗ್ರಿಡ್, ಲಾರ್ಸನ್, ಆರ್‌ಐಎಲ್ ಶೇರುಗಳು ಶೇ.1.65ರ ಏರಿಕೆಯನ್ನು ದಾಖಲಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.