ಮುಂಗಾರು ಆತಂಕ, ಲಾಭ ನಗದೀಕರಣ: ಸೆನ್ಸೆಕ್ಸ್‌ 179 ಅಂಕ ಕುಸಿತ, ನಿಫ್ಟಿ 11,644

Team Udayavani, Apr 3, 2019, 5:20 PM IST

Sensex-headache-730

ಮುಂಬಯಿ : ನಿರಂತರ ನಾಲ್ಕು ದಿನಗಳಿಂದ ಗೆಲುವಿನ ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆ ಇಂದು ಸೋಲಿನ ಹಾದಿಗೆ ಹೊರಳಿಕೊಂಡಿತು.

ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 179.3 ಅಂಕಗಳ ನಷ್ಟದೊಂದಿಗೆ 38,877.12 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 69.25 ಅಂಕಗಳ ಅಂಕಗಳ ನಷ್ಟದೊಂದಿಗೆ 11,643.95 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಅಂತ್ಯಗೊಳಿಸಿತು.

ಈ ಬಾರಿಯ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಲಿದೆ ಎಂಬ ಸ್ಕೈ ಮೆಟ್‌ ವರದಿಯಿಂದ ಮುಂಬಯಿ ಶೇರು ಪೇಟೆಯಲ್ಲಿ ಆತಂಕ ಕವಿದು ಕೊಂಡದ್ದೇ ಸೆನ್ಸೆಕ್ಸ್‌, ನಿಫ್ಟಿ ಕುಸಿತಕ್ಕೆ ಕಾರಣವಾಯಿತು.

ಪರಿಣಾಮವಾಗಿ ತೈಲ, ಅನಿಲ, ಕ್ಯಾಪಿಟಲ್‌ ಗೂಡ್ಸ್‌ ಮತ್ತು ಕೈಗಾರಿಕಾ ರಂಗದ ಶೇರುಗಳು ಇಂದು ಮಧ್ಯಾಹ್ನದ ಬಳಿಕ ತೀವ್ರ ಹೊಡೆತಕ್ಕೆ ಗುರಿಯಾದವು.

ಇದೇ ಗುರುವಾರ ಆರ್‌ ಬಿ ಐ ಹಣಕಾಸು ನೀತಿ ಸಮಿತಿಯು 2019-20ರ ಸಾಲಿನ ತನ್ನ ಮೊದಲ ಪ್ರಕಟನೆಯನ್ನು ಮಾಡಲಿದ್ದು ಮುಂಬಯಿ ಶೇರು ಪೇಟೆಯ ಕಣ್ಣು ಅದರ ಮೇಲೆಯೇ ನೆಟ್ಟಿದೆ.

ಇಂದಿನ ವಹಿವಾಟಿನಲ್ಲಿ ಎಸ್‌ಬಿಐ ಶೇರು ಶೇ.2.4ರ ನಷ್ಟಕ್ಕೆ ಗುರಿಯಾಗಿ ಟಾಪ್‌ ಲೂಸರ್‌ ಎನಿಸಿಕೊಂಡಿತು. ಇದನ್ನು ಅನುಸರಿಸಿ ಎಸ್‌ ಬ್ಯಾಂಕ್‌, ಭಾರ್ತಿ ಏರ್‌ ಟೆಲ್‌, ಲಾರ್ಸನ್‌, ಸನ್‌ ಫಾರ್ಮಾ, ಮಹೀಂದ್ರ, ಐಸಿಐಸಿಐ ಬ್ಯಾಂಕ್‌, ಒಎನ್‌ಜಿಸಿ, ಆರ್‌ಐಎಲ್‌ ಶೇರುಗಳು ಶೇ.2.37ರ ಕುಸಿತಕ್ಕೆ ಗುರಿಯಾದವು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,760 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 974 ಶೇರುಗಳು ಮುನ್ನಡೆ ಸಾಧಿಸಿದವು; 1,631 ಶೇರುಗಳು ಹಿನ್ನಡೆಗೆ ಗುರಿಯಾದವು; 155 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.