ಮುಂಬಯಿ ಶೇರು 230 ಅಂಕ ಜಂಪ್; 11,400 ದಾಟಿದ ನಿಫ್ಟಿ
Team Udayavani, Mar 15, 2019, 5:37 AM IST
ಮುಂಬಯಿ : ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿದೆ. ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,400 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ದಾಟಿ ವಿಜೃಂಭಿಸಿದೆ.
ಭಾರತೀಯ ಶೇರು ಮಾರುಕಟ್ಟೆಯತ್ತ ವಿದೇಶಿ ಬಂಡವಾಳ ನಿರಂತರವಾಗಿ ಹರಿದು ಬರುತ್ತಿರುವುದು, ಡಾಲರ್ ಎದುರು ರೂಪಾಯಿ ಬಲವರ್ಧನೆಯಾಗುತ್ತಿರವುದು ಇವೇ ಮೊದಲಾದ ಧನಾತ್ಮಕ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯಲ್ಲಿ ತೇಜಿ ಕಂಡು ಬರುತ್ತಿದೆ.
ಬೆಳಗ್ಗೆ 11.10ರ ಸುಮಾರಿಗೆ ಸೆನ್ಸೆಕ್ಸ್ 230.72 ಅಂಕಗಳ ಏರಿಕೆಯೊಂದಿಗೆ 37,985.61 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 72.50 ಅಂಕಗಳ ಏರಿಕೆಯೊಂದಿಗೆ 11,415.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 20 ಪೈಸೆಗಳ ಜಿಗಿತವನ್ನು ದಾಖಲಿಸಿ 69.14 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.