ಹೆಚ್ಚಿದ ವಿದೇಶಿ ಬಂಡವಾಳ, ಇಳಿದ ಕಚ್ಚಾ ತೈಲ: Sensex 161 ಅಂಕ ಜಂಪ್
Team Udayavani, May 3, 2019, 10:58 AM IST
ಮುಂಬಯಿ : ವಿದೇಶಿ ಬಂಡವಾಳದ ಒಳ ಹರಿವಿನಲ್ಲಿ ಆಗಿರುವ ಹೆಚ್ಚಳ ಮತ್ತು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಆಗಿರುವ ಇಳಿಕೆಯ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ದಾಖಲಿಸಿತು.
ಇಂದು ಬೆಳಗ್ಗೆ 10.50ರ ಸುಮಾರಿಗೆ ಸೆನ್ಸೆಕ್ಸ್ 161 ಅಂಕಗಳ ಮುನ್ನಡೆಯನ್ನು ಸಂಪಾದಿಸಿ 39,142.43 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 32.60 ಅಂಕಗಳ ಏರಿಕೆಯೊಂದಿಗೆ 11,757.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಕೋಟಕ್ ಮಹೀಂದ್ರ, ಭಾರ್ತಿ ಏರ್ಟೆಲ್, ಎನ್ಟಿಪಿಸಿ, ಟಾಟಾ ಮೋಟರ್, ಭಾರ್ತಿ ಇನ್ಫ್ರಾಟೆಲ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡಿದ್ದವು. ಅದೇ ವೇಳೆ ಎಚ್ ಸಿ ಎಲ್ ಟೆಕ್, ಟಿಸಿಎಸ್, ಗ್ರಾಸಿಂ, ವಿಪ್ರೋ, ಟೆಕ್ ಮಹೀಂದ್ರ ಟಾಪ್ ಲೂಸರ್ಗಳಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 13 ಪೈಸೆಗಳ ಚೇತರಿಕೆಯನ್ನು ಕಂಡು 69.24 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.