ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ
ಷೇರುಪೇಟೆಯ ಆರಂಭಿಕ ವಹಿವಾಟು ಜಿಗಿತದಲ್ಲಿದ್ದು, ನಂತರ ವಹಿವಾಟಿನಲ್ಲಿ ಷೇರು ಅಂಕ ಕುಸಿತ ಕಂಡಿತ್ತು.
Team Udayavani, Jun 28, 2021, 5:27 PM IST
ಮುಂಬಯಿ: ಜಾಗತಿಕ ಮಾರುಕಟ್ಟೆಯ ನೆಗೆಟಿವ್ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಸೋಮವಾರ(ಜೂನ್ 28)ದ ದಿನಾಂತ್ಯಕ್ಕೆ 189 ಅಂಕ ಕುಸಿತ ಕಂಡು ವಹಿವಾಟು ಮುಕ್ತಾಯಗೊಳಿಸಿದೆ. ಇಂದು ಬೆಳಗ್ಗೆ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆ ಕಂಡಿತ್ತು.
ಆರಂಭಿಕ ವಹಿವಾಟಿನಲ್ಲಿ ಷೇರುಪೇಟೆ ಸೆನ್ಸೆಕ್ಸ್ 53,126.73 ಸಾರ್ವಕಾಲಿಕ ಏರಿಕೆ ಕಂಡಿತ್ತು. ಸಂಜೆ ಬಿಎಸ್ ಇ ಸಂವೇದಿ ಸೂಚ್ಯಂಕ 189.45 ಅಂಕ ಕುಸಿತ ಕಂಡು 52,735.59 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಎಸ್ ಇ ನಿಫ್ಟಿ 45.65 ಅಂಕ ಕುಸಿತ ಕಂಡು 15,814.70ರ ಗಡಿಗೆ ಕುಸಿದಿದೆ.
ಸೆನ್ಸೆಕ್ಸ್, ನಿಫ್ಟಿ ಕುಸಿತದಿಂದ ಟೈಟಾನ್, ಟಿಸಿಎಸ್, ಎಚ್ ಸಿಎಲ್ ಟೆಕ್, ರಿಲಯನ್ಸ್ ಇಂಡಸ್ಟ್ರೀಸ್, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಭಾರ್ತಿ ಏರ್ ಟೆಲ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಡಾ.ರೆಡ್ಡೀಸ್, ಟಾಟಾ ಸ್ಟೀಲ್, ಟೆಕ್ ಮಹೀಂದ್ರ, ಸನ್ ಫಾರ್ಮಾ, ಎಚ್ ಯುಎಲ್ ಷೇರುಗಳು ಲಾಭ ಗಳಿಸಿದೆ.
ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜಾಗತಿಕ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟು ಜಿಗಿತದಲ್ಲಿದ್ದು, ನಂತರ ವಹಿವಾಟಿನಲ್ಲಿ ಷೇರು ಅಂಕ ಕುಸಿತ ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.