ಶೀಘ್ರದಲ್ಲೇ ವೈಯಕ್ತಿಕ ಆದಾತ ತೆರಿಗೆ ಕಡಿತಗೊಳ್ಳುತ್ತದೆ : ವಿತ್ತ ಸಚಿವೆ
Team Udayavani, Dec 7, 2019, 9:46 PM IST
ಹೊಸದಿಲ್ಲಿ: ಸದ್ಯ ದೇಶ ಎದುರಿಸುತ್ತಿರುವ ಆರ್ಥಿಕ ಹಿಂಜರಿತಕ್ಕೆ ಬೇಡಿಕೆ ಕಡಿಮೆಯಾಗಿ ಉತ್ಪಾದನಾ ವಲಯದ ಕುಸಿತವೇ ಕಾರಣ ಎಂದು ಹೇಳಲಾಗುತ್ತಿದೆ. ಜನರು ಹೆಚ್ಚು ಹೆಚ್ಚು ಉತ್ಪನ್ನಗಳನ್ನು ಕೊಂಡುಕೊಂಡರೇ ಮಾತ್ರ ಉತ್ಪಾದನಾ ವಲಯಕ್ಕೆ ಬೇಡಿಕೆ ಬಂದು ಹೆಚ್ಚು ಉತ್ಪನ್ನಗಳು ಮಾರಾಟವಾಗುತ್ತದೆ. ಆದರೆ ಈ ಜನರಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೇಡಿಕೆ ವ್ಯಕ್ತ ವಾಗದೇ ಇರುವುದರಿಂದ ಬೇಡಿಕೆ ಹೆಚ್ಚಿಸಲು ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆಂಗ್ಲ ಭಾಷಾ ಜಾಲತಾಣವೊಂದರ ಸಮಾವೇಶದಲ್ಲಿ ಭಾಗಿಯಾದ ಸಚಿವರು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಸುಳಿವು ನೀಡಿದ್ದಾರೆ.ಆದಾಯ ತೆರಿಗೆ ಇಳಿಕೆಯಾಗುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಮುಂಬರುವ ಬಜೆಟ್ ವರೆಗೂ ಕಾಯಬೇಕು ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮುಂಬರುವ ಬಜೆಟ್‌ನಲ್ಲಿ ಆದಾಯ ತೆರಿಗೆ ಇಳಿಕೆಯಾಗುವ ಸಾಧ್ಯತೆಯ ಸುಳಿವನ್ನು ನೀಡಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ಮುಂಬರುವ 2021ನೇ ಸಾಲಿನ ಕೇಂದ್ರ ಮುಂಗಡ ಪತ್ರ ಮಂಡನೆಯಾಗಲಿದೆ(ಬಜೆಟ್). ವೈಯಕ್ತಿಕ ಆದಾಯ ತೆರಿಗೆ ಇಳಿಸಿ, ಜನರನ್ನು ಖರೀದಿಯಲ್ಲಿ ತೊಡಗುವಂತೆ ಮಾಡುವುದು ಹಾಗೂ ಖಾಸಗಿ ಹೂಡಿಕೆಯನ್ನು ಉತ್ತೇಜಿಸುವುದು ಸರಕಾರದ ಮುಂದಿನ ಯೋಜನೆಯಾಗಿದೆ.
ಇಳಿಯುತ್ತಿರುವ ಜಿಡಿಪಿ ಈ ತ್ತೈಮಾಸಿಕದಲ್ಲಿ ಶೇ 4.5ಕ್ಕೆ ಕುಸಿಯುವ ಸಾಧ್ಯತೆ ಇದೆ. ಕಾರ್ಪೊರೇಟ್ ತೆರಿಗೆ ಕಡಿತಗೊಳಿಸುವ ನಿಟ್ಟಿನಲ್ಲಿ ಮಸೂದೆಗೆ ತಿದ್ದುಪಡಿಯ ಮೆಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ಟಿಎಂಸಿಯ ಸೌಗತ ರಾಯ್ ಅವರು ಆದಾಯ ತೆರಿಗೆ ಕುರಿತು ಪ್ರಶ್ನೆ ಎತ್ತಿದ್ದರು. ಅದಕ್ಕೆ ಉತ್ತರವಾಗಿ ಸೀತಾರಾಮನ್ ಆದಾರ ತೆರಿಗೆ ಕಡಿತದ ಕುರಿತು ಸುಳಿವು ನೀಡಿದ್ದು, ನೆರೆಹೊರೆಯ ರಾಷ್ಟ್ರಗಳ ಆರ್ಥಿಕ ನಿಯಮವನ್ನು ಉದಾಹರಣೆ ನೀಡುವ ಮೂಲಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
ಎರಡನೇ ತ್ತೈಮಾಸಿಕದಲ್ಲಿ ದೇಶದ ಆರ್ಥಿಕ ವೃದ್ಧಿ ದರವು ಕಳೆದ ಆರು ವರ್ಷಗಳಲ್ಲಿ ಕನಿಷ್ಠ ಶೇ.4.5ಕ್ಕೆ ಕುಸಿತಗೊಂಡಿದ್ದು, ಆರ್ಥಿಕತೆ ಉತ್ತೇಜನಕ್ಕಾಗಿ ಸರಕಾರ ಕಳೆದ ನಾಲ್ಕು ತಿಂಗಳಿಂದ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಈ ಹಿಂದೆ ಸೆಪ್ಟೆಂಬರ್‌ನಲ್ಲಿ, ಕೇಂದ್ರ ಸರಕಾರ ಮಂದಗತಿಯಲ್ಲಿ ಸಾಗುತ್ತಿದ್ದ ಆರ್ಥಿಕ ವಲಯಕ್ಕೆ ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಉತ್ತೇಜನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.