ಸವರಿನ್‌ ಗೋಲ್ಡ್‌ ಬಾಂಡ್‌ ಯೋಜನೆ

ದೀಪಾವಳಿ ಸಂದರ್ಭ ಚಿನ್ನದ ಮೇಲೆ ಹೂಡಿಕೆಗೆ ಮತ್ತೂಂದು ಅವಕಾಶ

Team Udayavani, Nov 10, 2020, 6:12 AM IST

Gold

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಸವರಿನ್‌ ಗೋಲ್ಡ್‌ ಬಾಂಡ್‌(ಎಸ್‌ಜಿಬಿ) ಯೋಜನೆಯ 8ನೇ ಸರಣಿ ನ. 9ರಿಂದ 13ರ ವರೆಗೆ ಜಾರಿಯಲ್ಲಿರಲಿದೆ. ದೀಪಾವಳಿ ಹಿನ್ನೆಲೆಯಲ್ಲಿ ಆರ್‌ಬಿಐ ಈ ಯೋಜನೆಯಲ್ಲಿ ಹೂಡಿಕೆಗೆ ಅವಕಾಶ ಮಾಡಿಕೊಟ್ಟಿದೆ. ಬಾಂಡ್‌ ಬೆಲೆಯನ್ನು ಪ್ರತೀ ಗ್ರಾಂ.ಗೆ 5,177 ರೂ. ಎಂದು ಆರ್‌ಬಿಐ ನಿಗದಿ ಮಾಡಿದೆ.

ಈ ಬಾರಿ ಆರ್‌ಬಿಐ ನಿಗದಿಗೊಳಿಸಿರುವ ಚಿನ್ನದ ಬಾಂಡ್‌ ಬೆಲೆ ಮಾರುಕಟ್ಟೆಯ ನೈಜ ಬೆಲೆಗಿಂತ ಕಡಿಮೆಯಾಗಿದೆ. ಇದಕ್ಕೆ ನಿರಂತರವಾಗಿ ಏರುತ್ತಿರುವ ಧಾರಣೆಯೇ ಕಾರಣವಾಗಿದೆ. ಆನ್‌ಲೈನ್‌ ಮೂಲಕ ಸವರಿನ್‌ ಗೋಲ್ಡ್‌ ಬಾಂಡ್‌ಗೆ ನೋಂದಾಯಿಸುವವರಿಗೆ ಹಾಗೂ ಡಿಜಿಟಲ್‌ ಪಾವತಿ ಮಾಡುವ ಗ್ರಾಹಕರಿಗೆ ಪ್ರತಿ ಗ್ರಾಂ.ಗೆ 50 ರೂ. ಗಳ ರಿಯಾಯಿತಿ ನೀಡಲಾಗುತ್ತದೆ. ಅಂಥ ಹೂಡಿಕೆದಾರರಿಗೆ ಪ್ರತಿ ಗ್ರಾಂ.ಗೆ 5,127 ರೂ. ದರದಲ್ಲಿ ಬಾಂಡ್‌ ಲಭಿಸಲಿದೆ. ಇಂಥ ಬಾಂಡ್‌ಗಳನ್ನು ಡಿಮ್ಯಾಟ್‌ ರೂಪಕ್ಕೆ ಪರಿವರ್ತಿಸಬಹುದಾಗಿದೆ.

ಎಲ್ಲಿ ದೊರೆಯುತ್ತದೆ?: ಪ್ರಮುಖ ಅಂಚೆ ಕಚೇರಿ, ವಾಣಿಜ್ಯ ಬ್ಯಾಂಕ್‌ಗಳು, ಬಿಎಸ್‌ಇ, ಎನ್‌ಎಸ್‌ಇ ಮತ್ತು ನ್ಯಾಶನಲ್‌ ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಶನ್‌ನಲ್ಲಿ ಎಸ್‌ಜಿಬಿಗಳನ್ನು ಖರೀದಿಸಬಹುದು.

ಎಷ್ಟು ಚಿನ್ನವನ್ನು ಖರೀದಿಸಬಹುದು?: ಒಬ್ಬ ವ್ಯಕ್ತಿಯು ಆರ್ಥಿಕ ವರ್ಷದಲ್ಲಿ ಕನಿಷ್ಠ 1 ಗ್ರಾಂ.ನಿಂದ ಗರಿಷ್ಠ 4 ಕೆ.ಜಿ.ವರೆಗಿನ ಚಿನ್ನದ ಬಾಂಡ್‌ಗಳನ್ನು ಖರೀದಿ ಸಬಹುದು. 8 ವರ್ಷಗಳ ಮೆಚ್ಯುರಿಟಿ ಸಮಯ ಹೊಂದಿದ್ದು, ಬಯಸಿದರೆ 5 ವರ್ಷಕ್ಕೆ ಮುಕ್ತಾಯ ಗೊಳಿಸಬಹುದು.

ಏನೆಲ್ಲ ದಾಖಲೆಗಳು ಅಗತ್ಯ?: ಆಧಾರ್‌ ಕಾರ್ಡ್‌, ಪಾನ್‌, ಪಾಸ್‌ಪೋರ್ಟ್‌, ವೋಟರ್‌ ಐಡಿ ಪೈಕಿ ಯಾವುದಾದರೂ ಒಂದನ್ನು ನೀಡಬಹುದು. ಅರ್ಜಿ ಸಲ್ಲಿಸುವ ಸಂದರ್ಭ ಪಾನ್‌ ನಂಬರ್‌ ಕಡ್ಡಾಯ.

ಏನಿದು ಬಾಂಡ್‌?
ಎಸ್‌ಜಿಬಿ ಆರ್‌ಬಿಐನ ಬಾಂಡ್‌ ಆಗಿದೆ. ಬಾಂಡ್‌ ಮೌಲ್ಯವನ್ನು ಚಿನ್ನದ ಮಾರುಕಟ್ಟೆಯ ಮೂಲಕ ಅಳೆಯಲಾಗುತ್ತದೆ. ಬಾಂಡ್‌ 5 ಗ್ರಾಂ. ಚಿನ್ನದ್ದಾಗಿದ್ದರೆ, ಐದು ಗ್ರಾಂ ಚಿನ್ನದ ಬೆಲೆ ಬಾಂಡ್‌ ಬೆಲೆಗೆ ಸಮನಾಗಿರುತ್ತದೆ. ಮೆಚ್ಯುರಿಟಿ ಬಳಿಕ ಹಣವನ್ನು ಹೂಡಿಕೆದಾರರ ಖಾತೆಗೆ ಜಮಾ ಮಾಡಲಾಗುತ್ತದೆ. ಈ ವೇಳೆ ಕಡೆಯ 3 ಕೆಲಸದ ದಿನಗಳ ದರವನ್ನು ಮಾನ ದಂಡವನ್ನಾಗಿಟ್ಟುಕೊಂಡು ಅದರ ಸರಾಸರಿ ದರವನ್ನು ಅನ್ವಯಿಸಿ ಬಾಂಡ್‌ನ‌ ಮೌಲ್ಯವನ್ನು ನಿರ್ಧರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಶೇ. 2.50ರ ಬಡ್ಡಿ ದರವೂ ಇದ್ದು, ತೆರಿಗೆ ವಿನಾಯಿತಿಯನ್ನೂ ಹೊಂದಿದೆ.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.