ಲಾಕ್ ಡೌನ್: ಕೋವಿಡ್ 19 ಎಫೆಕ್ಟ್-3 ತಿಂಗಳ ಇಎಂಐ ರಿಯಾಯ್ತಿಗೆ ಬ್ಯಾಂಕ್ ಗಳ ಅನುಮತಿ
ಮಾರ್ಚ್ 1ರಿಂದ ಮೇ 31ರವರೆಗೆ ಸಾಲದ ಕಂತನ್ನು ಪಾವತಿಸಲು ಆರ್ ಬಿಐ ಸೂಚನೆಯಂತೆ ರಿಯಾಯ್ತಿ ನೀಡಿರುವುದಾಗಿ ಸ್ಪಷ್ಟಪಡಿಸಿದೆ.
Team Udayavani, Mar 31, 2020, 8:05 PM IST
Representative Image
ನವದೆಹಲಿ:ಮಾರಣಾಂತಿಕ ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿಸಲು ಮೂರು ತಿಂಗಳ ಇಎಂಐಗೆ ಆರ್ ಬಿಐ ರಿಯಾಯ್ತಿ ನೀಡಿದ್ದು ಇದೀಗ ಬಹುತೇಕ ಬ್ಯಾಂಕ್ ಗಳು ಗ್ರಾಹಕರಿಗೆ, ಸಾಲಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್ ಬಿಐ ಸೂಚನೆಯಂತೆ ರಿಯಾಯ್ತಿ ಘೋಷಿಸಿವೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಅಫ್ ಕಾಮರ್ಸ್. ಇಂಡಿಯನ್ ಬ್ಯಾಂಕ್ ಪ್ರತ್ಯೇಕವಾಗಿ ಟ್ವೀಟ್ ಮಾಡುವ ಮೂಲಕ ಗ್ರಾಹಕರು ಮಾರ್ಚ್ 1ರಿಂದ ಮೇ 31ರವರೆಗೆ ಸಾಲದ ಕಂತನ್ನು ಪಾವತಿಸಲು ಆರ್ ಬಿಐ ಸೂಚನೆಯಂತೆ ರಿಯಾಯ್ತಿ ನೀಡಿರುವುದಾಗಿ ಸ್ಪಷ್ಟಪಡಿಸಿದೆ.
ಈ ಮೊದಲು ಆರ್ ಬಿಐ ಘೋಷಿಸಿದ್ದ ಮೂರು ತಿಂಗಳ ಇಎಂಐ ರಿಯಾಯ್ತಿ ಕುರಿತಂತೆ ಗ್ರಾಹಕರಲ್ಲಿ ಗೊಂದಲ ಮೂಡಿಸಿದ್ದು, ಇದೀಗ ಬ್ಯಾಂಕ್ ಗಳ ಸೂಚನೆಯಿಂದ ನಿರಾಳರಾದಂತಾಗಿದೆ. ಕ್ರೆಡಿಟ್ ಕಾರ್ಡ್ ಹೊರತುಪಡಿಸಿ ಎಲ್ಲಾ ಬ್ಯಾಂಕ್, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ಸಾಲಕ್ಕೆ ಇದು ಅನ್ವಯವಾಗಲಿದೆ ಎಂದು ಆರ್ ಬಿಐ ತಿಳಿಸಿತ್ತು.
ಕೋವಿಡ್ 19 ವೈರಸ್ ಹರಡುವಿಕೆಯಿಂದ ದೇಶದ ಆರ್ಥಿಕತೆ ಮೇಲೆ ಭಾರೀ ಹೊಡೆತ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕೆ ನೀಡುವ ನಿಟ್ಟಿನಲ್ಲಿ ಆರ್ ಬಿಐ ರೆಪೋ ದರವನ್ನು ಕಡಿತಗೊಳಿಸಿತ್ತು. ಅಲ್ಲದೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಾ ಬಡವರಿಗೆ, ರೈತರಿಗೆ ಆರ್ಥಿಕ ನೆರವನ್ನು ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.