ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 164 ಅಂಕ ಕುಸಿತ, 15,700ಕ್ಕೆ ಕುಸಿದ ನಿಫ್ಟಿ
ನಿಫ್ಟಿ ನಷ್ಟ ಅನುಭವಿಸಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಹೆಡ್ ಬಿನೋದ್ ಮೋದಿ ತಿಳಿಸಿದ್ದಾರೆ.
Team Udayavani, Jul 1, 2021, 4:50 PM IST
ಮುಂಬಯಿ: ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಗುರುವಾರ(ಜುಲೈ 01) 164 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಇದರ ಪರಿಣಾಮ ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಅನುಭವಿಸಿದೆ.
ಇದನ್ನೂ ಓದಿ:ಜುಲೈ 31ರ ತನಕ ಸೋಂಕು ತಡೆ ಅಭಿಯಾನ : ಉತ್ತರ ಪ್ರದೇಶ ಸರ್ಕಾರದ ನೂತನ ಕ್ರಮ
ಮುಂಬಯಿ ಷೇರುಪೇಟೆಯ ಬಿಎಸ್ ಇ ಸೆನ್ಸೆಕ್ಸ್ 164. 11 ಅಂಕಗಳಷ್ಟು ಇಳಿಕೆಯಾಗಿದ್ದು, 52,318.60 ಅಂಕಗಳೊಂದಿಗೆ ದಿನಾಂತ್ಯದ
ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 41.50 ಅಂಕಗಳಷ್ಟು ಕುಸಿತ ಕಂಡಿದ್ದು, 15,680ರ ಗಡಿಗೆ ಕುಸಿದಿದೆ.
ಸೆನ್ಸೆಕ್ಸ್ ಇಳಿಕೆಯ ಪರಿಣಾಮ ಬಜಾಜ್ ಫಿನ್ ಸರ್ವ್, ಇನ್ಫೋಸಿಸ್, ಟೆಕ್ ಮಹೀಂದ್ರ, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಡಾ.ರೆಡ್ಡೀಸ್, ಬಜಾಜ್ ಆಟೋ, ಸನ್ ಪಾರ್ಮಾ, ಏಷ್ಯನ್ ಪೇಂಟ್ಸ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭಗಳಿಸಿದೆ.
ಫೈನಾಶ್ಶಿಯಲ್ ಮತ್ತು ಐಟಿ ಷೇರುಗಳ ಲಾಭಾಂಶವನ್ನು ಹೂಡಿಕೆದಾರರು ಹೆಚ್ಚು ಕಾಯ್ದಿರಿಸಿದ ಪರಿಣಾಮ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಮತ್ತು ನಿಫ್ಟಿ ನಷ್ಟ ಅನುಭವಿಸಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಹೆಡ್ ಬಿನೋದ್ ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.