ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 200 ಅಂಕ ಜಿಗಿತ: 16,700 ಅಂಕ ಸಮೀಪಿಸಿದ ನಿಫ್ಟಿ
ನಿಫ್ಟಿ ಕೂಡಾ 128.15 ಅಂಕ ಏರಿಕೆಯೊಂದಿಗೆ 16,624.60 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.
Team Udayavani, Aug 25, 2021, 11:12 AM IST
ಮುಂಬಯಿ: ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ(ಆಗಸ್ಟ್ 25) 200ಕ್ಕೂ ಅಧಿಕ ಅಂಕ ಏರಿಕೆ ಕಂಡಿದ್ದು, ಇದರಿಂದಾಗಿ ಎಚ್ ಡಿಎಫ್ ಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಐಸಿಐಸಿಐ ಬ್ಯಾಂಕ್ ಷೇರು ಲಾಭಗಳಿಸಿದೆ.
ಬುಧವಾರ ಮುಂಬಯಿ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸಾರ್ವಕಾಲಿಕ ಗರಿಷ್ಠ 56,188.49 ಅಂಕ ತಲುಪಿದ್ದು ಬಳಿಕ ಷೇರುಪೇಟೆ ಸೆನ್ಸೆಕ್ಸ್ 211.23 ಅಂಕಗಳ ಏರಿಕೆಯೊಂದಿಗೆ 56,170.21 ಅಂಕಗಳಲ್ಲಿ ವಹಿವಾಟು ನಡೆಸಿದೆ.
ಇದೇ ರೀತಿ ಎನ್ ಎಸ್ ಇ ನಿಫ್ಟಿ 67.75 ಅಂಕ ಏರಿಕೆಯೊಂದಿಗೆ ದಾಖಲೆಯ 16,692.35 ಅಂಕಗಳ ಮಟ್ಟ ತಲುಪಿದೆ. ಸೆನ್ಸೆಕ್ಸ್ ಏರಿಕೆಯಿಂದ ಟಾಟಾ ಸ್ಟೀಲ್, ಎನ್ ಟಿಪಿಸಿ, ಎನ್ ಟಿಪಿಸಿ, ಎಲ್ ಆ್ಯಂಡ್ ಟಿ, ನೆಸ್ಲೆ ಇಂಡಿಯಾ, ಐಸಿಐಸಿಐ ಬ್ಯಾಂಕ್, ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಟೈಟಾನ್, ಟೆಕ್ ಮಹೀಂದ್ರ, ಎಚ್ ಸಿಎಲ್ ಟೆಕ್, ಏಷ್ಯನ್ ಪೇಂಟ್ಸ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಕಂಡಿದೆ. ಮಂಗಳವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 402.19 ಅಂಕಗಳ ಏರಿಕೆಯೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 55,958.98 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೂಡಾ 128.15 ಅಂಕ ಏರಿಕೆಯೊಂದಿಗೆ 16,624.60 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.