ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 364 ಅಂಕ ಏರಿಕೆ, 15,885ರ ಗಡಿ ದಾಟಿದ ನಿಫ್ಟಿ
ಬಜಾಜ್ ಫಿನ್ ಸರ್ವ್, ಬಜಾಜ್ ಫೈನಾನ್ಸ್, ಎನ್ ಟಿಪಿಸಿ ಮತ್ತು ಎಚ್ ಡಿಎಫ್ ಸಿ ಷೇರುಗಳು ನಷ್ಟ ಕಂಡಿದೆ.
Team Udayavani, Aug 2, 2021, 4:43 PM IST
ಮುಂಬಯಿ:ಈಕ್ವಿಟಿ ಸೂಚ್ಯಂಕ ಸೋಮವಾರ (ಆಗಸ್ಟ್ 02) ಏರಿಕೆ ಕಂಡ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 350ಕ್ಕೂ ಹೆಚ್ಚು ಅಂಕ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಇದರಿಂದ ಐಟಿ ಮತ್ತು ಆಟೋ ಷೇರುಗಳು ಲಾಭ ಗಳಿಸುವಂತಾಗಿದೆ.
ಇದನ್ನೂ ಓದಿ:ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗಿದೆ: ಐಸಿಎಂಆರ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 364 ಅಂಕಗಳಷ್ಟು ಏರಿಕೆ ಕಂಡಿದ್ದು, 52,951 ಅಂಕಗಳೊಂದಿಗೆ ದಿನದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 122 ಅಂಕಗಳಷ್ಟು ಜಿಗಿತ ಕಂಡಿದ್ದು, 15,885ರ ಗಡಿ ತಲುಪುವಂತಾಗಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟೈಟಾನ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ರಿಲಯನ್ಸ್, ಟಿಸಿಎಸ್, ಆ್ಯಕ್ಸಿಸ್ ಬ್ಯಾಂಕ್, ಮಾರುತಿ ಮತ್ತು ಇನ್ಫೋಸಿಸ್ ಷೇರುಗಳು ಶೇ.3.44ರಷ್ಟು ಲಾಭಗಳಿಸಿದೆ. ಏತನ್ಮಧ್ಯೆ ಟಾಟಾ ಸ್ಟೀಲ್, ಬಜಾಜ್ ಫಿನ್ ಸರ್ವ್, ಬಜಾಜ್ ಫೈನಾನ್ಸ್, ಎನ್ ಟಿಪಿಸಿ ಮತ್ತು ಎಚ್ ಡಿಎಫ್ ಸಿ ಷೇರುಗಳು ನಷ್ಟ ಕಂಡಿದೆ.
ಎನ್ ಎಸ್ ಇ ನಿಫ್ಟಿ ಸೂಚ್ಯಂಕ ಏರಿಕೆಯಿಂದ ಆಟೋ ಮತ್ತು ಐಟಿ ಷೇರುಗಳು ಶೇ.4.79ರಷ್ಟು ಲಾಭಗಳಿಸಿದೆ. ಮುಂಬಯಿ ಷೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 333.69 ಅಂಕಗಳಷ್ಟು ಏರಿಕೆಯಾಗಿದ್ದು, 52,920.53 ಅಂಕಗಳ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 101.65 ಅಂಕ ಏರಿಕೆಯೊಂದಿಗೆ 15,864.70ರ ಗಡಿ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.