ನಿರಂತರ 3ನೇ ದಿನವೂ ಕುಸಿತ: ಮುಂಬಯಿ ಶೇರು 150 ಅಂಕ ನಷ್ಟ
Team Udayavani, Mar 15, 2018, 4:27 PM IST
ಮುಂಬಯಿ : ನಿರಂತರ ಮೂರನೇ ದಿನ ಕುಸಿತದ ಹಾದಿಯಲ್ಲಿ ಸಾಗಿ ಬಂದಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 150 ಅಂಕಗಳ ನಷ್ಟದೊಂದಿಗೆ 33,685.54 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 50.75 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,360.15 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಕಳೆದೆರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 82.20 ಅಂಕಗಳ ನಷ್ಟವನ್ನು ಅನುಭವಿಸಿತ್ತು.
ಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಎಸ್ಬಿಐ ನೇತೃತ್ವದಲ್ಲಿ ಬ್ಯಾಂಕ್ ಶೇರುಗಳೆಲ್ಲ ಇಂದು ತೀವ್ರ ಹಿನ್ನಡೆಗೆ ಗುರಿಯಾದವು. ಪಂಜಾಬ್ ನ್ಯಾಶನಲ್ ಬ್ಯಾಂಕಿನ ಬ್ರಾಡಿ ಹೌಸ್ ಶಾಖೆಯಲ್ಲಿ ಚಂದ್ರಿ ಪೇಪರ್ ಆ್ಯಂಡ್ ಅಲೈಡ್ ಪ್ರಾಡಕ್ಟ್ ಸಂಸ್ಥೆಗೆ ಅಕ್ರಮವಾಗಿ 9 ಕೋಟಿ ರೂ.ಗಳ ಎಲ್ಓಯು ನೀಡಲಾಗಿರುವುದರ ವಿರುದ್ಧ ಸಿಬಿಐ ಇಂದು ಕೇಸು ದಾಖಲಿಸಿಕೊಂಡಿತು. ಬ್ಯಾಂಕ್ ಶೇರುಗಳ ಕುಸಿತಕ್ಕೆ ಈ ವಿದ್ಯಮಾನವೇ ಕಾರಣವಾಯಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು 2,847 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,640 ಶೇರುಗಳು ಮುನ್ನಡೆ ಸಾಧಿಸಿದವು; 1,04 ಶೇರುಗಳು ಹಿನ್ನಡೆಗೆ ಗುರಿಯಾದವು; 162 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.