2020-21ರ ಆರ್ಥಿಕ ವರ್ಷದ ಅತಿ ಹೆಚ್ಚು ಕಾರುಗಳ ಮಾರಾಟ : ಮಾರುತಿ ಸುಜುಕಿ ಮೇಲುಗೈ

Team Udayavani, Apr 14, 2021, 11:44 AM IST

top-selling-cars-in-india-top-5-best-selling-car-models-from-maruti-suzuki-stable-in-2020-21

ನವ ದೆಹಲಿ : ಕಳೆದ ಆರ್ಥಿಕ ವರ್ಷದಲ್ಲಿ ಮಾರುತಿ ಸುಜುಕಿ ಇಂಡಿಯಾದ ಐದು ಕಾರುಗಳು ಅತಿ ಹೆಚ್ಚು ಮಾರಾಟವಾಗಿವೆ ಎಂದು ವರದಿಯೊಂದು ತಿಳಿಸಿದೆ.

ಈ ಕುರಿತಾಗಿ ಕಂಪೆನಿ ಅಧಿಕೃತವಘಾಇ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ದೇಶದ ಅತಿ ದೊಡ್ಡ ಕಾರು ಉತ್ಪಾದಕ ಕಂಪನಿಯಾಗಿರುವ ಮಾರುತಿ ಸುಜುಕಿ ಇಂಡಿಯಾದ (MSI)ಯ ಶ್ವಿಫ್ಟ್, ವ್ಯಾಗನ್ ಆರ್, ಬಲೆನೊ (Baleno), ಆಲ್ಟೋ ಹಾಗೂ ಡಿಸೈರ್ (Dzire) ಈ ಐದೂ ಕಾರುಗಳು ಸತತ ನಾಲ್ಕನೇ ವರ್ಷದಲ್ಲಿಯೂ ಕೂಡ ಭಾರಿ ಮಾರಾಟಗೊಂಡಿವೆ ಎಂದು ತಿಳಿಸಿದೆ.  2020-21 ಆರ್ಥಿಕ ವರ್ಷದಲ್ಲಿ ಅತ್ಯಧಿಕ ಮಾರಾಟಗೊಂಡ ಟಾಪ್ 10  ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ 7 ಮಾಡೆಲ್ ಗಳು ಒಳಗೊಂಡಿವೆ ಎನ್ನುವುದು ವಿಶೇಷ.

ಓದಿ : ಅನುದಿನದ ಸ್ಮರಣೆಯಲ್ಲಿ ಬಾಬಾಸಾಹೇಬ್‌ ಅಂಬೇಡ್ಕರ್‌

ಇನ್ನು, ಸ್ವಿಫ್ಟ್ ಅತಿ ಹೆಚ್ಚು ಮಾರಾಟಗೊಂಡ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಬಲೇನೋ ಎರಡನೇ ಸ್ಥಾನದಲ್ಲಿದೆ. ಕಂಪನಿಯ ವ್ಯಾಗನ್ ಆರ್, ಆಲ್ಟೊ ಹಾಗೂ ಡಿಸೈರ್ ಗಳಿಗೂ ಕೂಡ ಜನರ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.

2020 ಆರ್ಥಿಕವರ್ಷದಲ್ಲಿ ಪ್ಯಾಸೆಂಜರ್ ವೆಹಿಕಲ್ ಮಾರಾಟದಲ್ಲಿ ಶೇ.30 ರಷ್ಟು ಪಾರುಪತ್ಯ ಈ ಕಾರುಗಳದ್ದೆ ಆಗಿದೆ.

ಸ್ವಿಫ್ಟ್ ಕಾರು ಅತಿ ಹೆಚ್ಚು ಮಾರಾಟಗೊಂಡ ನಂ.1 ಕಾರ್ ಆಗಿ ಹೊರಹೊಮ್ಮಿದ್ದು, ಕಂಪನಿ ಸುಮಾರು 1.72 ಲಕ್ಷಕ್ಕೂ ಅಧಿಕ ಕಾರುಗಳ ಮಾರಾಟ ನಡೆಸಿದೆ. ಬಲೇನೋ ಅತಿ ಹೆಚ್ಚು ಮಾರಾಟಗೊಂಡ ಎರಡನೇ ಕಾರ್. ಈ ಆರ್ಥಿಕ ವರ್ಷದಲ್ಲಿ ಸುಮಾರು 1.63 ಲಕ್ಷಕ್ಕೂ ಹೆಚ್ಚು ಯುನಿಟ್ ಗಳ ಮಾರಾಟ ಕಂಪನಿ ನಡೆಸಿದೆ. ಕಂಪನಿಯ ವ್ಯಾಗನ್ ಆರ್ ಕಾರು 1.60 ಲಕ್ಷ ಯುನಿಟಗಳ ಮಾರಾಟವಾಗುವ ಮೂಲಕ ಮೂರನೇ ಸ್ಥಾನದಲ್ಲಿದೆ. ವಿಷಯದಲ್ಲಿ ಆಲ್ಟೊ ಹಾಗೂ ಡಿಸೈರ್ ಅನುಕ್ರಮವಾಗಿ ನಾಲ್ಕನೇ ಮತ್ತು ಐದನೇ ಸ್ಥಾನದಲ್ಲಿವೆ. 2021ರಲ್ಲಿ 1.53ಲಕ್ಷ ಆಲ್ಟೊ ಯೂನಿಟ್ ಗಳು ಮಾರಾಟಗೊಂಡಿದ್ದರೆ, ಡಿಸೈರ್ ನ 1.28  ಲಕ್ಷ ಯುನಿಟ್ ಗಳು ಮಾರಾಟಗೊಂಡಿವೆ ಎಂದು ಕಂಪೆನಿ ಬಹಿರಂಗ ಪಡಿಸಿದ ಮಾಹಿತಿ ಪಟ್ಟಿ ತಿಳಿಸಿದೆ.

ಇನ್ನು, ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಮಾರುತಿ ಸುಜುಕಿಯ ಮಾರ್ಕೆಟಿಂಗ್ ಮತ್ತು ಸೇಲ್ಸ್ ಡಿಪಾರ್ಟ್ ಮೆಂಟ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶಶಾಂಕ್ ಶ್ರೀವಾಸ್ತವ್, ಹೆಚ್ಚಾಗುತ್ತಿರುವ ಪ್ರತಿಸ್ಪರ್ಧೆಯ ನಡುವೇನೂ ಕೂಡ ಆರ್ಥಿಕ ವರ್ಷ 2020-21 ರಲ್ಲಿ ದೇಶದಲ್ಲಿ ಅತಿ ಹೆಚ್ಚು ಮಾರಾಟಗೊಂಡ ವಾಹನ ಮಾರುತಿ ಸುಜುಕಿಯಾಗಿದೆ. ಕೊರೊನಾ ಕಾಲಾವಧಿಯಲ್ಲಿ ಆರ್ಥಿಕ ಹಿನ್ನಡೆತದ ಕಾರಣ ಜನರು ಹಲವು ಸವಾಲುಗಳನ್ನು ಎದುರಿಸಿದ್ದಾರೆ. ಆದರೆ, ಗ್ರಾಹಕರು ನಮ್ಮ ಭರವಸೆಯನ್ನು ಹುಸಿಯಾಗಿಡಲು ಬಿಟ್ಟಿಲ್ಲ. ಹೀಗಾಗಿ ದೇಶದಲ್ಲಿರುವ 90ಕ್ಕೂ ಅಧಿಕ ಬ್ರಾಂಡ್ ಗಳ ನಡುವೆ ಕಂಪನಿಯ ಕಾರುಗಳು ತಮ್ಮ ಪಾರುಪತ್ಯ ಮೆರೆಯುವಲ್ಲಿ ಯಶಸ್ವಿಯಾಗಿವೆ ಎಂದು ಹೇಳಿದ್ದಾರೆ.

ಓದಿ : ಪ್ರತಿಯೊಬ್ಬರಿಗೂ ಆರೋಗ್ಯ : ಥೈರಾಯ್ಡ್ ಕಾಯಿಲೆಗಳು ನಮ್ಮನ್ನು ಸೋಲಿಸಬಾರದು

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.