ಕೋವಿಡ್ ಏಟಿಗೆ ಮುಗ್ಗರಿಸಿದ ಷೇರು ಪೇಟೆ
Team Udayavani, Apr 4, 2020, 1:26 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದೇಶದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಮುಂದಿನ ಆರ್ಥಿಕ ಸ್ಥಿತಿಯ ಬಗ್ಗೆ ತೀವ್ರ ಕಳವಳ ಮೂಡಿರುವುದು ಷೇರುಪೇಟೆಯಲ್ಲೂ ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆಗೆ ವಿದೇಶಿ ಹೂಡಿಕೆಯ ಹೊರಹರಿವು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ 76 ರೂ.ಗಿಂತ ಕೆಳಗೆ ಇಳಿದಿದೆ.
ಇವೆಲ್ಲದರ ಪರಿಣಾಮ ಎಂಬಂತೆ ಹೂಡಿಕೆದಾರರು ಷೇರುಗಳ ಮಾರಾಟದಲ್ಲಿ ತೊಡಗಿದ ಕಾರಣ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಶುಕ್ರವಾರ 674 ಅಂಕ ಕುಸಿದು, 27,590ರಲ್ಲಿ ವಹಿವಾಟು ಅಂತ್ಯಗೊಳಿಸಿದೆ. ನಿಫ್ಟಿ 170 ಅಂಕ ಕುಸಿತ ದಾಖಲಿಸಿ, 8,083ರಲ್ಲಿ ವಹಿವಾಟು ಕೊನೆಗೊಳಿಸಿದೆ.
ಅವಧಿ ಕಡಿತ: ಏ.7ರಿಂದ 17ರವರೆಗೆ ದೇಶದ ಕರೆನ್ಸಿ ಮತ್ತು ಬಾಂಡ್ ಮಾರುಕಟ್ಟೆ ಬೆಳಗ್ಗೆ 10ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಆರ್‌ಬಿಐ ಆದೇಶ ಹೊರಡಿಸಿದೆ. ಬಾಂಡ್ ಮಾರುಕಟ್ಟೆ ವಹಿವಾಟು ಬೆಳಗ್ಗೆ 11 ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ. ಆದರೆ, ಷೇರು ಮಾರುಕಟ್ಟೆ ವಹಿವಾಟಿನ ಅವಧಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಸೋಮವಾರ ಸಭೆ: ಪ್ರಮುಖ ತೈಲ ಉತ್ಪಾದಕ ದೇಶವಾದ ರಷ್ಯಾ ನೇತೃತ್ವದ ಒಪೆಕ್ ಗ್ರೂಪ್ ಸೋಮವಾರ ಸಭೆ ನಡೆಸಲಿದೆ. ದರ ಸಮರದಿಂದಾಗಿ ಅಲ್ಲೋಲಕಲ್ಲೋಲವಾಗಿರುವ ತೈಲ ಮಾರುಕಟ್ಟೆಯನ್ನು ಸ್ಥಿರವಾಗಿರಿಸುವ ಬಗ್ಗೆ ಚರ್ಚೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.