![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, May 18, 2022, 11:43 PM IST
ಲಂಡನ್: ಯುನೈಟೆಂಡ್ ಕಿಂಗ್‌ಡಮ್ ಅರ್ಥ ವ್ಯವಸ್ಥೆ ಬರೋಬ್ಬರಿ ನಲವತ್ತು ವರ್ಷಗಳಲ್ಲಿಯೇ ಗರಿಷ್ಠ ಎನ್ನಬಹುದಾದ ಹಣದುಬ್ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬುಧವಾರ ಯು.ಕೆ. ಸರಕಾರದ ಆಫೀಸ್ ಫಾರ್ ನ್ಯಾಶನಲ್ ಸ್ಟಾಟಿಸ್ಟಿಕ್ಸ್ (ಒಎನ್‌ಎಸ್) ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಹಣದುಬ್ಬರ ಪ್ರಮಾಣ ಶೇ. 9 ಆಗಿದೆ. ಜಗತ್ತಿನಲ್ಲಿ ಮತ್ತೂಂದು ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂಬ ಭೀತಿಯ ನಡುವೆಯೇ ಈ ಬೆಳವಣಿಗೆ ಉಂಟಾಗಿದೆ.
ಯು.ಕೆ. ವಿತ್ತ ಸಚಿವ ರಿಷಿ ಸುನಕ್ ಅವರು ಹಣದುಬ್ಬರ ಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಇದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಜಗತ್ತಿನ ಹಲವು ರಾಷ್ಟ್ರಗಳು ಹೆಚ್ಚಿನ ರೀತಿಯಲ್ಲಿ ಹಣದುಬ್ಬರದ ಸ್ಥಿತಿಯನ್ನು ಎದುರಿಸುತ್ತಿವೆ.
ಇಂಧನ ಕ್ಷೇತ್ರದಲ್ಲಿ ಉಂಟಾಗಿರುವ ಬೆಲೆ ಏರಿಕೆಯಿಂದಾಗಿ ಶೇ. 9ರ ಪ್ರಮಾಣದ ಹಣದುಬ್ಬರ ದರ ಏರಿಕೆಯಾಗಿದೆ. ಜಗತ್ತಿನಾದ್ಯಂತ ಉಂಟಾಗುತ್ತಿರುವ ಇಂಥ ಬೆಳವಣಿಗೆಗಳಿಂದ ಜನರನ್ನು ಪೂರ್ಣ ಪ್ರಮಾಣದಲ್ಲಿ ರಕ್ಷಿಸಲು ಸಾಧ್ಯವಿಲ್ಲ. ಆದರೆ, ಅದರ ಪ್ರಭಾವ ಜನರ ಮೇಲೆ ಬೀಳದಂತೆ ಕ್ರಮ ಕೈಗೊಳ್ಳಲು ಸಾಧ್ಯವಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.