ಅರ್ಥ ವ್ಯವಸ್ಥೆ ಚೇತರಿಕೆಗೆ ಲಸಿಕೆಯೇ ಮದ್ದು: ವಿತ್ತ ಸಚಿವೆ
Team Udayavani, Sep 12, 2021, 11:00 PM IST
ನವದೆಹಲಿ/ಟ್ಯುಟಿಕಾರಿನ್: ದೇಶದಲ್ಲಿ 73 ಕೋಟಿ ಮಂದಿಗೆ ಕೋವಿಡ್ ಲಸಿಕೆ ಹಾಕಿಸಲಾಗಿದೆ. ಇದರಿಂದಾಗಿ ದೇಶದ ಅರ್ಥ ವ್ಯವಸ್ಥೆ ಚೇತರಿಸಿಕೊಳ್ಳಲು ಕಾರಣವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ಟ್ಯುಟಿಕಾರಿನ್‌ನಲ್ಲಿ ತಮಿಳುನಾಡು ಮರ್ಕಂಟೈಲ್ ಬ್ಯಾಂಕ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಾದ್ಯಂತ ಲಸಿಕೆ ಹಾಕುವ ಕಾರ್ಯಕ್ರಮ ನಿರಾಂತಕವಾಗಿ ನಡೆಯುತ್ತಿದೆ.
ಹೀಗಾಗಿ, ಜನರು ತಮ್ಮ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ನೆರವಾಗಿದೆ. ರೈತರು ತಮ್ಮ ಕೃಷಿ ಜಮೀನಿನಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ. ಹೀಗಾಗಿ, ಲಸಿಕೆ ಹಾಕುವುದೊಂದೇ ಅರ್ಥ ವ್ಯವಸ್ಥೆ ಚೇತರಿಸಿಕೊಳ್ಳಲು ಇರುವ ದಾರಿ ಎಂದು ವಿತ್ತ ಸಚಿವೆ ಹೇಳಿದ್ದಾರೆ.
ದೇಶದಲ್ಲಿ ಶನಿವಾರದಿಂದ ಭಾನುವಾರದ ಅವಧಿಯಲ್ಲಿ 28,591 ಹೊಸ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 338 ಮಂದಿ ಅಸುನೀಗಿದ್ದಾರೆ. ಮತ್ತೂಂದು ಧನಾತ್ಮಕ ಬೆಳವಣಿಗೆಯಲ್ಲಿ ಸಕ್ರಿಯ ಸೋಂಕು ಸಂಖ್ಯೆ 6,600 ಇಳಿಕೆಯಾಗಿದ್ದರಿಂದ 3,32,36,921ಕ್ಕೆ ತಲುಪಿದೆ. ಚೇತರಿಕೆ ಪ್ರಮಾಣ ಶೇ.97.51 ಆಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳ ಪೈಕಿ ಕೇರಳ ಪಾಲು ಶೇ.70 ಆಗಿದೆ. ಇನ್ನೊಂದೆಡೆ, ಕೇರಳದಲ್ಲಿ ಭಾನುವಾರ ಒಂದೇ ದಿನ 20,240 ಹೊಸ ಕೇಸುಗಳು ಪತ್ತೆಯಾಗಿವೆ. 67 ಮಂದಿ ಅಸುನೀಗಿದ್ದಾರೆ.
ಇದನ್ನೂ ಓದಿ:ಡ್ರಗ್ಸ್ ಜಿಹಾದ್: ಕೇರಳದಲ್ಲಿ ವಾಕ್ಸಮರ ಜೋರು
ಇದೇ ವೇಳೆ ತಮಿಳುನಾಡಿನಲ್ಲಿ ಭಾನುವಾರ ಒಂದೇ ದಿನ 22.6 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ರಾಜಧಾನಿ ಚೆನ್ನೈನಲ್ಲಿ 1.11 ಲಕ್ಷ ಡೋಸ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.