ವಂಚನೆ ಪ್ರಕರಣ; ಲಂಡನ್ ಪೊಲೀಸರಿಂದ ವಿಜಯ್ ಮಲ್ಯ ಬಂಧನ, ಬಿಡುಗಡೆ
Team Udayavani, Oct 3, 2017, 5:32 PM IST
ಲಂಡನ್: ಭಾರತೀಯ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 9 ಸಾವಿರ ಕೋಟಿ ರೂಪಾಯಿ ಸಾಲ ಮಾಡಿ ಪರಾರಿಯಾಗಿದ್ದ ಮದ್ಯದ ದೊರೆ ವಿಜಯ್ ಮಲ್ಯ ರನ್ನು ಲಂಡನ್ ಪೊಲೀಸರು ಮಂಗಳವಾರ ಬಂಧಿಸಿದ್ದು, ಕೋರ್ಟ್ ಜಾಮೀನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಮಲ್ಯ ವಿರುದ್ಧ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದ್ದವು. ಭಾರತ ಹಲವು ಬಾರಿ ಮಲ್ಯ ವಿರುದ್ಧ ವಿಚಾರಣೆಗೆ ಹಾಜರಾಗಲು ವಾರಂಟ್ ಜಾರಿಗೊಳಿಸಿತ್ತು.ಆದರೆ ವಿಜಯ್ ಮಲ್ಯ ಭಾರತಕ್ಕೆ ಬಾರದೆ ಲಂಡನ್ ನಲ್ಲಿಯೇ ತಲೆಮರೆಸಿಕೊಂಡಿದ್ದರು.
ವಿಜಯ್ ಮಲ್ಯ ಅವರನ್ನು ವಶಕ್ಕೆ ತೆಗೆದುಕೊಂಡ ಕೆಲವೇ ಹೊತ್ತಿನಲ್ಲಿ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ವರದಿ ವಿವರಿಸಿದೆ.
ಏಪ್ರಿಲ್ ತಿಂಗಳಿನಲ್ಲಿಯೂ ಮಲ್ಯ ಅವರನ್ನು ಲಂಡನ್ ಪೊಲೀಸರು ಪ್ರಕರಣದ ಪ್ರಾಥಮಿಕ ವಿಚಾರಣೆ ವೇಳೆ ಬಂಧಿಸಿದ ಕೆಲವೇ ಹೊತ್ತಿನಲ್ಲಿ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.