ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ರೈಲ್ವೇ ಇಲಾಖೆ ಉದ್ಯೋಗಿ ಸೆರೆ
Team Udayavani, Mar 24, 2019, 11:50 AM IST
ಬೆಂಗಳೂರು: ಪಿಎಸ್ಐ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಸಂಬಂಧ ರೈಲ್ವೇ ಇಲಾಖೆ ಸಿಬ್ಬಂದಿ ಗೋವಿಂದರಾಜು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಗೋವಿಂದರಾಜು ರೈಲ್ವೆ ಇಲಾಖೆಯಲ್ಲಿ ಟಿಕೇಟ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರಯ್ಯ ಜತೆ ಒಡನಾಟ ಹೊಂದಿದ್ದ.
20ಕ್ಕೂ ಹೆಚ್ಚು ಪಿಎಸ್ಐ ಅಭ್ಯರ್ಥಿಗಳನ್ನು ಶಿವಕುಮಾರಯ್ಯ ಬಳಿ ಕಳುಹಿಸಿಕೊಟ್ಟಿದ್ದ ಎಂಬ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.