ಕರಾವಳಿ ಕನ್ನಡಿಗರೊಂದಿಗೆ ಡಿವಿಎಸ್ ಸಭೆ
Team Udayavani, Mar 25, 2019, 11:03 AM IST
ಬೆಂಗಳೂರು: ಕರಾವಳಿಗರಲ್ಲಿ ವಿದ್ಯೆ, ಬುದ್ಧಿ, ಸಂಸ್ಕೃತಿ ಎಲ್ಲವೂ ಇದೆ. ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದೇವೆ. ರಾಜಧಾನಿ ನಮ್ಮ ಕೈಹಿಡಿದಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ವಾಸವಾಗಿರುವ ಕರಾವಳಿ ಭಾಗದ ಕನ್ನಡಗಿರ ಸಭೆ ಭಾನುವಾರ ಯಶವಂತಪುರದ ಮೇವಾರ ಭವನದಲ್ಲಿ ನಡೆಸಿ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲೆಡೆಯೂ ಭರದ ಪ್ರಚಾರ ಆರಂಭವಾಗಿದೆ.
ಪ್ರತಿ ವಾರ್ಡ್‌ನಲ್ಲೂ ಸಭೆ ನಡೆಸುತ್ತಿದ್ದೇವೆ. ಹಾಗೆಯೇ ವಿವಿಧ ಸಮುದಾಯ, ಸಂಘಟನೆಗಳ ಸಭೆಯನ್ನು ಕರೆಯುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಕನ್ನಡಿಗರ ಸಭೆ ಕರೆಯಲಾಗಿದೆ ಎಂದು ಹೇಳಿದರು. ಕರಾವಳಿಯಲ್ಲಿ ಉದ್ಯೋಗಾವಕಾಶದ ಕೊರತೆ ಇದೆ.
ಇದಕ್ಕೆ ಎಲ್ಲ ರಾಜಕೀಯ ಪಕ್ಷಗಳು ಕಾರಣ. ಅಲ್ಲಿಂದ ಬೆಂಗಳೂರಿಗೆ ವಲಸೆ ಬಂದಿರುವವರಿಗೆ ಇಲ್ಲಿ ಸಾಕಷ್ಟು ಅವಕಾಶ ಸಿಕ್ಕಿದೆ. ಬೆಂಗಳೂರು ನಮ್ಮ ಮನೆಯಂತಾಗಿದೆ. ಕ್ಷೇತ್ರದ ಸಂಸದನಾಗಿ ಸಸದಾ ನಿಮ್ಮೊಂದಿಗೆ ಇರಲಿದ್ದೇನೆ.
ನಿಮ್ಮ ಸಮಸ್ಯೆಗಳಿಗೂ ಸ್ಪಂದಿಸುತ್ತೇನೆ ಎಂದರು. ಸಾಹಿತಿ ಡಾ.ಕೆ.ಪಿ.ಪುತ್ತೂರಾಯ, ಪಾಲಿಕೆ ಸದಸ್ಯ ರಾಜೇಂದ್ರ ಕುಮಾರ್, ಮಾಜಿ ಉಪಮೇಯರ್ ಎಸ್. ಹರೀಶ್, ಉದಯ ಧರ್ಮಸ್ಥಳ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.