ಹೆಚ್ಚುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ: ಇಂದು ಮತ್ತೆ 36 ಹೊಸ ಸೋಂಕಿತರು
Team Udayavani, May 9, 2020, 12:58 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶುಕ್ರವಾರ ಒಟ್ಟು 48 ಸೋಂಕು ಪ್ರಕರಣಗಳು ದೃಢವಾಗಿದ್ದರೆ, ಶನಿವಾರ ಇದುವರೆಗೆ 36 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣಗಳು ದೃಢವಾಗಿದೆ. ಬೆಂಗಳೂರು ನಗರದಲ್ಲಿ 12, ಉತ್ತರ ಕನ್ನಡ ಜಿಲ್ಲೆಯಲ್ಲಿ ಏಳು, ದಾವಣಗೆರೆಯಲ್ಲಿ ಆರು, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಬೀದರ್ ನಲ್ಲಿ ತಲಾ ಮೂರು, ವಿಜಯಪುರ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದೃಢವಾಗಿದೆ.
ಬೆಂಗಳೂರಿನಲ್ಲಿ ಸೋಂಕಿತ ಸಂಖ್ಯೆ 419ರ ಸಂಪರ್ಕದಿಂದ ಐವರಿಗೆ ಸೋಂಕು ತಾಗಿದೆ. ಉಳಿದಂತೆ ಪಿ-449 ಮತ್ತು ಪಿ-454 ಸಂಪರ್ಕದಿಂದ ಸೋಂಕು ತಾಗಿರುವುದು ದೃಢವಾಗಿದೆ.
ದಾವಣಗೆರೆಯಲ್ಲಿ ಮತ್ತೆ ಆರು ಪ್ರಕರಣಗಳು ದೃಢವಾಗಿದೆ. ಸೋಂಕಿತ ಸಂಖ್ಯೆ 651ರ ಸಂಪರ್ಕದಿಂದ ಐವರಿಗೆ ಸೋಂಕು ತಾಗಿದ್ದರೆ, ಸೋಂಕಿತ ಸಂಖ್ಯೆ553ರ ದ್ವಿತೀಯ ಸಂಪರ್ಕದಿಂದ ಓರ್ವನಿಗೆ ಸೋಂಕು ತಾಗಿದೆ.
ಸೋಂಕಿತ ಸಂಖ್ಯೆ 578ರ ಸಂಪರ್ಕದಿಂದ ದಕ್ಷಿಣ ಕನ್ನಡದ ಮೂವರಿಗೆ ಸೋಂಕು ತಾಗಿದೆ. ಒಂದೇ ಮನೆಯ ನಾಲ್ವರಿಗೆ ಸೋಂಕು ತಾಗಿದಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸೋಂಕಿತರ ಸಂಖ್ಯೆ ಬೆಳೆಯುತ್ತಿದೆ. ಭಟ್ಕಳದ ಏಳು ಜನರಿಗೆ ಸೋಂಕು ತಾಗಿದೆ. ಸೋಂಕಿತ ಸಂಖ್ಯೆ 659ರ ದ್ವಿತೀಯ ಸಂಪರ್ಕದಿಂದ ಒಂದೂವರೆ ವರ್ಷದ ಮಗು ಸೇರಿದಂತೆ ಆರು ಜನರಗೆ ಸೋಂಕು ದೃಢವಾಗಿದೆ. ಸೋಂಕಿತ ಸಂಖ್ಯೆ 740ರ ಸಂಪರ್ಕದಿಂದ 68 ವರ್ಷದ ವೃದ್ಧರಿಗೆ ಸೋಂಕು ದೃಢವಾಗಿದೆ.
ಬೀದರ್ ನಲ್ಲಿ ಮೂವರಿಗೆ ಸೋಂಕು ದೃಢವಾಗಿದೆ. ಸೋಂಕಿತ ಸಂಖ್ಯೆ 647 ಮತ್ತು 648ರ ಸಂಪರ್ಕದಿಂದ ಕ್ರಮವಾಗಿ 30 ವರ್ಷದ ಗಂಡು ಮತ್ತು 12 ವರ್ಷದ ಬಾಲಕಿಗೆ ಸೋಂಕು ತಾಗಿದೆ. ಮತ್ತೊಂದು ಸೋಂಕಿತನ ಸಂಪರ್ಕ ಪತ್ತೆ ಮಾಡಲಾಗುತ್ತಿದೆ.
ಚಿತ್ರದುರ್ಗದಲ್ಲಿ ಮತ್ತೆ ಮೂವರಿಗೆ ಸೋಂಕು ದೃಢವಾಗಿದ್ದು, ಗುಜರಾತ್ ನ ಅಹಮದಾಬಾದ್ ಗೆ ಪ್ರಯಾಣ ಮಾಡಿದ ಹಿನ್ನೆಲೆಯಳ್ಳ ಮೂವರಿಗೆ ಸೋಂಕು ತಾಗಿರುವುದು ಖಚಿತವಾಗಿದೆ.
ವಿಜಯಪುರದ 11 ವರ್ಷದ ಬಾಲಕಿಗೆ ಸೋಂಕು ತಾಗಿದ್ದರೆ, ತುಮಕೂರಿನ 45 ವರ್ಷದ ಪುರುಷನಿಗೆ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ ಇಂದು ಹೊಸ 36 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇವರಲ್ಲಿ 30 ಜನರು ಮರಣ ಹೊಂದಿದ್ದರೆ, 379 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಒಂದು ಪ್ರಕರಣ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.