ಗೋವಾದಲ್ಲಿ ರಾಜಕೀಯ ಸ್ವರೂಪ ಪಡೆಯುತ್ತಿದೆ ಕಾಂಗ್ರೆಸ್ ಶಾಸಕರ ಬಂಡಾಯ : ದಿಗಂಬರ್ ಕಾಮತ್
Team Udayavani, Jul 13, 2022, 5:14 PM IST
ಪಣಜಿ : ಸದ್ಯ ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಬಂಡಾಯವೇ ದೊಡ್ಡ ರಾಜಕೀಯ ಸ್ವರೂಪ ಪಡೆಯುತ್ತಿದೆ. ಮಡಗಾಂವ್ ಶಾಸಕ ಹಾಗೂ ಹಿರಿಯ ಕಾಂಗ್ರೇಸ್ ಮುಖಂಡ ದಿಗಂಬರ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2017ರಲ್ಲಿ ಇತರ ಶಾಸಕರು ಕಾಂಗ್ರೆಸ್ ತೊರೆದ ನಂತರವೂ ನಾವು ಕೊನೆಯವರೆಗೂ ಪಕ್ಷದಲ್ಲೇ ಇದ್ದೇವೆ, ಆದರೆ ಪಕ್ಷದಿಂದ ನಮಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಗೋವಾದಲ್ಲಿ 2017ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿತ್ತು. ಆದರೆ ಪಕ್ಷ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಲಿಲ್ಲ. ಹಾಗಾಗಿ ಅಂದು ಗೋವಾದಲ್ಲಿ ಅಧಿಕಾರ ಸ್ಥಾಪಿಸುವ ಅವಕಾಶದಿಂದ ವಂಚಿತರಾದೆವು. ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ನಂತರ 2022ರ ವಿಧಾನಸಭೆ ಚುನಾವಣೆವರೆಗೂ ನಾನೊಬ್ಬನೇ ಕಾಂಗ್ರೆಸ್ ಶಾಸಕನಾಗಿದ್ದೆ ಆದರೆ ಸದ್ಯ ಪಕ್ಷ ತನ್ನನ್ನು ನಿರ್ಲಕ್ಷಿಸುತ್ತಿದೆ ಎಂದು ದಿಗಂಬರ ಕಾಮತ್ ಬೇಸರ ಹೊರಹಾಕಿದರು.
ನಾನು ಪಕ್ಷ ವಿರೋಧಿ ಕ್ರಮ ಕೈಗೊಂಡು ಬಿಜೆಪಿ ಸೇರಲಿದ್ದೇನೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹಬ್ಬಿತ್ತು. ನನ್ನ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಅನರ್ಹತೆ ಅರ್ಜಿಯನ್ನು ವಿಧಾನ ಸಭೆಯ ಸಭಾಧ್ಯಕ್ಷರಿಗೆ ಸಲ್ಲಿಸಲಾಯಿತು. ಇಲ್ಲಿಯವರೆಗೂ ಪಕ್ಷಕ್ಕಾಗಿ ನಾನು ಪಟ್ಟ ಶ್ರಮಕ್ಕೆ ಪಕ್ಷದಲ್ಲಿ ಬೆಲೆ ಇಲ್ಲದಂತಾಗಿದೆ ಎಂದು ದಿಗಂಬರ ಕಾಮತ್ ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ : ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿ ಎರಡು ಬಸ್-ಗೂಡ್ಸ್ ಲಾರಿಗಳ ನಡುವೆ ಢಿಕ್ಕಿ
ಗೋವಾದ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯ ಕೈವಾಡವಿಲ್ಲ : ತಾನಾವಾಡೆ ಸ್ಪಷ್ಟನೆ
ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಬಂಡಾಯ ಅವರ ಪಕ್ಷದ ಆಂತರಿಕ ವಿಚಾರ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತಾನಾವಾಡೆ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಒಡೆಯಬೇಕು ಎಂದಿದ್ದರೆ ಮಿಷನ್ ಕಮಲ ಅರ್ಧಕ್ಕೆ ಬಿಡುವುದಿಲ್ಲ ಎಂದು ಹೇಳಿದ ಅವರು, ಗೋವಾದ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯ ಕೈವಾಡವಿಲ್ಲ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.