Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ
Team Udayavani, Jun 6, 2023, 2:58 PM IST
ಇಂಫಾಲ್: ಮಣಿಪುರದಲ್ಲಿ ಬಂಡುಕೋರರ ಗುಂಡಿನ ದಾಳಿಗೆ ಓರ್ವ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದು, ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡ ಘಟನೆ ನಡೆದಿದೆ.
ಜೂ. 5-6ರ ಮಧ್ಯರಾತ್ರಿಯಲ್ಲಿ ಭದ್ರತಾ ಪಡೆಗಳು ಮತ್ತು ಬಂಡುಕೋರರ ಗುಂಪಿನ ನಡುವಿನ ಗುಂಡಿನ ದಾಳಿಯಲ್ಲಿ ಮಣಿಪುರದ ಸೆರೌ ಪ್ರದೇಶದಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡು ಗಡಿ ಭದ್ರತಾ ಪಡೆ (ಬಿಎಸ್ಎಫ್) ನ ಓರ್ವ ಯೋಧ ಸಾವನ್ನಪ್ಪಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ಮಂತ್ರಿಪುಖ್ರಿಗೆ ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.
Security forces are conducting search operations in Sugnu-Serou of Manipur after an exchange of fire with insurgents last night, says Indian Army.
“Inputs indicate casualties to insurgents. This is being verified on the ground. During preliminary search-two AK series rifles, one… pic.twitter.com/CBIMs3GaFy
— ANI (@ANI) June 6, 2023
ಮಣಿಪುರದ ಸುಗ್ನು/ಸೆರೌ ಪ್ರದೇಶಗಳಲ್ಲಿ ಅಸ್ಸಾಂ ರೈಫಲ್ಸ್, ಬಿಎಸ್‌ಎಫ್ ಮತ್ತು ಪೊಲೀಸರಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ಬಂಡುಕೋರರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಕೂಡ ಪ್ರತಿದಾಳಿ ನಡೆಸಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.