UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ
Team Udayavani, Oct 14, 2024, 11:26 AM IST
ಉತ್ತರ ಪ್ರದೇಶ: ದುರ್ಗಾ ವಿಸರ್ಜನೆ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಗುಂಡಿನ ದಾಳಿಗೆ ಬಲಿಯಾದ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಭಾನುವಾರ(ಅ.13) ರಾತ್ರಿ ನಡೆದಿದೆ.
ಮೃತ ಯುವಕನ್ನು ರಾಹುವಾ ಮನ್ಸೂರ್ ಗ್ರಾಮದ ರಾಮ್ ಗೋಪಾಲ್ ಮಿಶ್ರಾ (22) ಎನ್ನಲಾಗಿದೆ.
ಏನಿದು ಘಟನೆ:
ಹಾರ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮೆಹ್ಸಿ ಮಹಾರಾಜ್‌ಗಂಜ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಡಿಜೆ ವಿಚಾರದಲ್ಲಿ ಎರಡು ಗುಂಪಿನ ನಡುವೆ ಮಾತಿಗೆ ಮಾತು ಬೆಳೆದಿದೆ ಬಳಿಕ ಇದು ಹಿಂಸಾತ್ಮಕ ರೂಪಕ್ಕೆ ತಿರುಗಿದೆ ಈ ವೇಳೆ ಒಂದು ಕೋಮಿನ ವ್ಯಕ್ತಿ ರಾಮ್ ಗೋಪಾಲ್ ಮೇಲೆ ಗುಂಡು ಹಾರಿಸಿದ್ದಾನೆ. ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು ಇದರಿಂದ ರೊಚ್ಚಿಗೆದ್ದ ಇನ್ನೊಂದು ಕೋಮಿನ ಜನ ಮಹಾರಾಜ್‌ಗಂಜ್ ಮಾರುಕಟ್ಟೆಯಲ್ಲಿದ್ದ ಕೆಲವು ವಾಹನಗಳನ್ನು ಧ್ವಂಸಗೊಳಿಸಿದರು ಮತ್ತು ಬೆಂಕಿ ಹಚ್ಚಿದರು.
ವಿಷಯ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಮಾರುಕಟ್ಟೆ ಪ್ರದೇಶವನ್ನು ಕಂಟೋನ್ಮೆಂಟ್ ಪ್ರದೇಶವಾಗಿ ಪರಿವರ್ತಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಐಜಿ ದೇವಿಪಟ್ಟಣ ಅಮರೇಂದ್ರ ಪ್ರಸಾದ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
#WATCH | Bahraich, Uttar Pradesh: Police conducted route march after clashes erupted during Durga idol immersion in Mahasi Maharajganj. (13.10) pic.twitter.com/KOOJQLGIfa
— ANI UP/Uttarakhand (@ANINewsUP) October 14, 2024
ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ:
ಈ ಹಿಂಸಾಚಾರದ ನಂತರ, ಪೊಲೀಸ್ ಠಾಣೆಯ ಪ್ರಭಾರಿ ಹಾರ್ದಿ ಮತ್ತು ಹೊರಠಾಣೆ ಪ್ರಭಾರಿ ಮಹ್ಸಿಯನ್ನು ಅಮಾನತುಗೊಳಿಸಲಾಗಿದೆ. ಅದೇ ಸಮಯದಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಹ್ರೈಚ್‌ನ ಮಹ್ಸಿಯಲ್ಲಿ ವಾತಾವರಣವನ್ನು ಹಾಳು ಮಾಡಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.
30 ಜನರ ಬಂಧನ :
ಘಟನೆಗೆ ಸಂಬಂಧಿಸಿ ಭರೈಚ್ ಪೊಲೀಸರು ಕನಿಷ್ಠ 30 ಜನರನ್ನು ಬಂಧಿಸಿರುವುದಾಗಿ ಹೇಳಲಾಗಿದೆ ಅಲ್ಲದೆ ರಾಮ್ ಗೋಪಾಲ್ ಮಿಶ್ರಾ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಸಲ್ಮಾನ್ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.