Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Team Udayavani, Nov 16, 2024, 1:17 AM IST
ಲಕ್ನೋ: ಉತ್ತರಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀ ಬಾಯಿ ಮೆಡಿಕಲ್ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಉಂಟಾಗಿ 10 ಶಿಶುಗಳು ಸುಟ್ಟು ಕರಕಲಾಗಿವೆ. ಆಸ್ಪತ್ರೆಯ ವಾರ್ಡ್ ನಲ್ಲಿ 40ಕ್ಕೂ ಹೆಚ್ಚು ಶಿಶುಗಳಿದ್ದವು.ಅವರೆಲ್ಲರನ್ನೂ ಪಾರು ಮಾಡಲಾಗಿದೆ.
ಆಸ್ಪತ್ರೆಯ ಆವರಣದಲ್ಲಿ ಸಿಲಿಂಡರ್ ಸ್ಫೋಟಗೊಂಡದ್ದೇ ಬೆಂಕಿ ಹತ್ತಿಕೊಳ್ಳಲು ಕಾರಣ ಎಂದು ಹೇಳಲಾಗಿದೆ. ಆದರೆ ಜಿಲ್ಲಾಧಿಕಾರಿ ಅವಿನಾಶ್ ಕುಮಾರ್ ಘಟನೆಗೆ ಶಾರ್ಟ್ ಸರ್ಕಿಟ್ ಕಾರಣ ಎಂದು ಹೇಳಿದ್ದಾರೆ.
ಶುಕ್ರವಾರ ತಡರಾತ್ರಿ 10.30ರ ವೇಳೆಗೆ ಈ ಘಟನೆ ನಡೆದಿದೆ. ಆರಂಭದಲ್ಲಿ ವಾರ್ಡ್‌ನಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಮಾತ್ರದಲ್ಲಿ ಅದು ವ್ಯಾಪಿಸಿಕೊಂಡಿತು. ಈ ವೇಳೆಗಾಗಲೇ 10 ಮಂದಿ ಶಿಶುಗಳು ಬೆಂಕಿಗೆ ಆಹುತಿಯಾಗಿದ್ದವು.
ಕಾಲ್ತುಳಿತ ಮಾದರಿ ಸ್ಥಿತಿ:
ಬೆಂಕಿ ಕಾಣಿಸಿಕೊಂಡ ತಕ್ಷಣವೇ ವಾರ್ಡ್‌ನಲ್ಲಿದ್ದ ಎಲ್ಲರಲ್ಲಿಯೂ ಭೀತಿ ಆವರಿಸಿಕೊಂಡಿತು. ಸಿಬ್ಬಂದಿ, ಮಕ್ಕಳ ಕುಟುಂಬ ವರ್ಗದವರು ಗಾಬರಿಯಿಂದ ಓಡಾಡಲು ಆರಂಭಿಸಿದರು. ಹೀಗಾಗಿ, ಅಲ್ಲಿ ಕಾಲ್ತುಳಿತ ಮಾದರಿಯ ಸ್ಥಿತಿ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆಘಾತಕಾರಿ ಅಂಶವೆಂದರೆ ಅಪಾಯವನ್ನು ಸೂಚಿಸುವ ಸೈರನ್ ಕಾರ್ಯವೆಸುತ್ತಿರಲಿಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದೆ. ಇದರಿಂದಾಗಿ ತಕ್ಷಣಕ್ಕೆ ವಾರ್ಡ್‌ನಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗಲಿಲ್ಲ
40 ಶಿಶುಗಳ ರಕ್ಷಣೆ:
ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ 6 ವಾಹನಗಳು ಮತ್ತು ಸ್ಥಳೀಯ ಸೇನಾ ಘಟಕಕ್ಕೆ ಸೇರಿದ ಮತ್ತೂಂದು ಅಗ್ನಿಶಾಮಕದಳದ ವಾಹನ ಮೆಡಿಕಲ್ ಕಾಲೇಜಿಗೆ ತೆರಳಿ ಬೆಂಕಿಯನ್ನು ನಂದಿಸಿದವು. ಕೂಡಲೇ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ 40 ಶಿಶುಗಳನ್ನು ರಕ್ಷಿಸಿದ್ದಾರೆ.
ಸಿಎಂ ಆಘಾತ:
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ಇತರ ಹಿರಿಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸುವಂತೆ ಆದೇಶ ನೀಡಿದ್ದಾರೆ. ಡಿಸಿಎಂ ಬೃಜೇಶ್ ಪಾಠಕ್ ಅವರನ್ನು ಸ್ಥಳಕ್ಕೆ ತೆರಳುವಂತೆ ಸಿಎಂ ಸೂಚಿಸಿದ್ದಾರೆ. ಮೆಡಿಕಲ್ ಕಾಲೇಜಿನ ಸಿಬ್ಬಂದಿಗೆ ಹೆಚ್ಚಿನ ನೆರವು ನೀಡುವ ನಿಟ್ಟಿನಲ್ಲಿ ಕಾನ್ಪುರದಿಂದ ವಿಶೇಷ ತಜ್ಞರನ್ನೂ ಕಳುಹಿಸಿ ಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.