ಚುನಾವಣೆ ವೆಚ್ಚದ ಮಿತಿ ಶೇ.10 ಹೆಚ್ಚಳ
Team Udayavani, Oct 21, 2020, 1:55 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣೆ ವೆಚ್ಚದ ಮಿತಿಯನ್ನು ಶೇ.10ರಷ್ಟು ಹೆಚ್ಚಿಸಲಾಗಿದೆ. ಈ ನಿಯಮ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಗೂ ಅನ್ವಯವಾಗುತ್ತದೆ.
ಚುನಾವಣ ಆಯೋಗದ ಶಿಫಾರಸಿನಂತೆ ಕೇಂದ್ರ ಸರಕಾರವು ಈ ನಿರ್ಧಾರ ಕೈಗೊಂಡಿದೆ. ಈ ನಿಯಮವು ಪ್ರಸ್ತುತ ಬಿಹಾರ ವಿಧಾನಸಭೆ ಚುನಾವಣೆ, ಒಂದು ಲೋಕಸಭಾ ಸ್ಥಾನ ಮತ್ತು 59 ವಿಧಾನಸಭಾ ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಗೆ ಅನ್ವಯಿಸುತ್ತದೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಚುನಾವಣ ಪ್ರಚಾರ ನಡೆಸಬೇಕಿರುವುದರಿಂದ ವೆಚ್ಚ ಹೆಚ್ಚಾಗುತ್ತದೆ. ಹೀಗಾಗಿ ವೆಚ್ಚದ ಮಿತಿಯನ್ನು ಶೇ. 10ರಷ್ಟು ಹೆಚ್ಚಿಸಬೇಕು ಎಂದು ಆಯೋಗವು ಶಿಫಾರಸು ಮಾಡಿತ್ತು.
ಅದರಂತೆ, ಇನ್ನು ಲೋಕಸಭಾ ಚುನಾವಣೆಗೆ ಗರಿಷ್ಠ 77 ಲಕ್ಷ ರೂ. (ಹಿಂದೆ 70 ಲಕ್ಷ ರೂ.), ವಿಧಾನಸಭೆ ಚುನಾವಣೆಗೆ ಗರಿಷ್ಠ 30.8 ಲಕ್ಷ ರೂ. (28 ಲಕ್ಷ ರೂ.)ಗಳನ್ನು ಅಭ್ಯರ್ಥಿಯೊಬ್ಬರು ಖರ್ಚು ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು
Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.