Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ
Team Udayavani, Oct 4, 2024, 2:58 PM IST
ಲಕ್ನೋ: ಟ್ರ್ಯಾಕ್ಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶುಕ್ರವಾರ(ಅ.04)ಮುಂಜಾನೆ ನಡೆದಿದೆ.
ಮಿರ್ಜಾಪುರ–ವಾರಣಾಸಿ ಗಡಿಯಲ್ಲಿರುವ ಕಚ್ವಾ ಬಳಿ ಈ ಭೀಕರ ಅಪಘಾತ ನಡೆದಿದೆ. ಟ್ರ್ಯಾಕ್ಟರ್ ಟ್ರಾಲಿ ವಾರಣಾಸಿ ಕಡೆಗೆ 13 ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಟ್ರಕ್ ಚಾಲಕ ನಿಯಂತ್ರಣ ತಪ್ಪಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.13 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿರ್ಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಂತಾಪ
ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಇದೊಂದು ನೋವಿನ ಘಟನೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
उत्तर प्रदेश के मिर्जापुर में हुआ सड़क हादसा अत्यंत पीड़ादायक है। इसमें जान गंवाने वालों के शोकाकुल परिजनों के प्रति मेरी गहरी संवेदनाएं। ईश्वर उन्हें इस पीड़ा को सहने की शक्ति प्रदान करे। इसके साथ ही मैं सभी घायलों के शीघ्र स्वस्थ होने की कामना करता हूं। राज्य सरकार की देखरेख…
— Narendra Modi (@narendramodi) October 4, 2024
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.
मीरजापुर ज़िले के कछवा थाना क्षेत्र में हुए दुर्भाग्यपूर्ण सड़क दुर्घटना में 10 लोगों के दुःखद निधन से मन व्यथित है। ईश्वर से प्रार्थना है कि दिवंगत आत्माओं को शांति और शोक संतप्त परिवारों को इस कठिन समय में संबल प्रदान करें।
— Anupriya Patel (@AnupriyaSPatel) October 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.