ಬೊಲೆರೋ– ಟ್ರಕ್ ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ದುರಂತ ಅಂತ್ಯ
Team Udayavani, May 4, 2023, 9:06 AM IST
ಛತ್ತೀಸ್‌ಗಢ: ಬೊಲೆರೋ ವಾಹನ – ಟ್ರಕ್ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಛತ್ತೀಸ್‌ಗಢದ ಧಮ್ತಾರಿ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ (ಮೇ 3 ರಂದು) ನಡೆದಿದೆ.
ಬೊಲೆರೋ ವಾಹನದಲ್ಲಿ ಕುಟುಂಬ ಸೋರಂನಿಂದ ಮರ್ಕಟೋಲಾಗೆ ಹೋಗುತ್ತಿದ್ದಾಗ ಮುಂದೆ ಬರುತ್ತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.
ಜಗತ್ರಾ ಬಳಿಯ ಕಂಕೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಒಂದು ಮಗು ಗಂಭೀರ ಗಾಯಗೊಂಡು, ಇತರರೂ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರಾಯ್‌ಪುರಕ್ಕೆ ರವಾನಿಸಲಾಗಿದ್ದು, ಟ್ರಕ್ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಘಟನೆಗೆ ಸಂತಾಪ ಸೂಚಿಸಿ,ಗಾಯಗೊಂಡವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದ್ದಾರೆ.
Chhattisgarh |10 killed and one child seriously injured after a truck and car collided near Jagatra in Balod district. The injured has been referred to Raipur for better treatment. Search for the driver of the truck underway: Jitendra Kumar Yadav, SP Balod pic.twitter.com/imklW8bqlP
— ANI MP/CG/Rajasthan (@ANI_MP_CG_RJ) May 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.