ಯೋಧರಿಗೆ ವರ್ಷಕ್ಕೆ 100 ರಜೆ!? ಪ್ರಸ್ತಾವನೆಯಾಗಿ ರೂಪು ತಳೆಯಲಿದೆ ಅಮಿತ್ ಶಾ ಪರಿಕಲ್ಪನೆ
ವರ್ಷದಲ್ಲಿ ನೂರು ದಿನ ಕುಟುಂಬದ ಜೊತೆಗೆ ಕಳೆಯುವ ಸೌಲಭ್ಯಕ್ಕಾಗಿ ಪ್ರಯತ್ನ
Team Udayavani, Mar 28, 2022, 8:00 AM IST
ನವದೆಹಲಿ: ಕೇಂದ್ರೀಯ ಸಶಸ್ತ್ರ ಸೇನಾ ಪಡೆಗಳ (ಸಿಎಪಿಎಫ್) ಯೋಧರು ವರ್ಷದಲ್ಲಿ ತಮ್ಮ ಕುಟುಂಬದೊಂದಿಗೆ ಕನಿಷ್ಠ 100 ದಿನಗಳನ್ನು ಕಳೆಯುವಂತೆ ಮಾಡುವ ಹೊಸ ಚಿಂತನೆಯನ್ನು ಕೇಂದ್ರ ಗೃಹ ಇಲಾಖೆ ನಿರ್ಧರಿಸಿದೆ.
ಗೃಹ ಸಚಿವ ಅಮಿತ್ ಶಾ ಅವರ ಈ ಪರಿಕಲ್ಪನೆಯ ಆಧಾರದಲ್ಲಿ ಯೋಧರಿಗೆ ವಾರ್ಷಿಕ 100 ರಜೆಗಳನ್ನು ನೀಡುವ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಅದನ್ನು ಕೇಂದ್ರದ ಒಪ್ಪಿಗೆ ಪಡೆದು ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಈ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಸಶಸ್ತ್ರ ಸೇನಾ ಪಡೆಗಳ ಅಧೀನದಲ್ಲಿ ಬರುವ ಎಲ್ಲಾ ಪಡೆಗಳಿಗೂ ಅನ್ವಯಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಈಗಿರುವ ನಿಯಮಗಳಲ್ಲಿ ಬದಲಾವಣೆ ತರಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ಎರಡು ವರ್ಷಗಳಿಂದ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಯಾನ ಮತ್ತೆ ಆರಂಭ
ಹೊಸ ಪ್ರಸ್ತಾವನೆ ಸಿದ್ಧಪಡಿಸುವ ಸಲುವಾಗಿ ಈಗಾಗಲೇ ಹಲವಾರು ಸುತ್ತಿನ ಸಭೆಗಳು ನಡೆದಿವೆ. ಈ ಸೌಲಭ್ಯ ಜಾರಿಗೊಳಿಸಲು ಇರುವ ಆಡಳಿತಾತ್ಮಕ ಅಡಚಣೆಗಳನ್ನು ನಿರ್ಮೂಲನೆ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಸಿಎಪಿಎಫ್ ನ ನಾನಾ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 10 ಲಕ್ಷ ಯೋಧರ ಮೇಲಿರುವ ದೈನಂದಿನ ಕರ್ತವ್ಯದ ಒತ್ತಡವನ್ನು ಇಳಿಸಿ, ಅವರ ಸಂತೋಷದ ಸಮಯವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.