ಈ ವರ್ಷ 101 ಉಗ್ರರ ಹತ್ಯೆ
ಕಣಿವೆ ರಾಜ್ಯದಲ್ಲಿ ಚುರುಕುಗೊಂಡ ಉಗ್ರ ನಿಗ್ರಹ ಕಾರ್ಯ
Team Udayavani, Jun 3, 2019, 6:00 AM IST
ಶ್ರೀನಗರ: ಪ್ರಸಕ್ತ ವರ್ಷದ ಮೊದಲ ಐದು ತಿಂಗಳಲ್ಲಿ 23 ವಿದೇಶಿಯರು ಸೇರಿದಂತೆ ಸುಮಾರು 101 ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ಆದರೆ, ಮಾರ್ಚ್‌ನಿಂದ ಈವರೆಗೆ ಅಂದರೆ ಕೇವಲ 3 ತಿಂಗಳ ಅವಧಿಯಲ್ಲಿ 50ಕ್ಕೂ ಹೆಚ್ಚು ಯುವಕರು ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗಿರುವುದು ಭದ್ರತೆ ಪಡೆಗಳಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಅಲ್ಖೈದಾದ ಅಂಗಸಂಸ್ಥೆಯಾದ ಅನ್ಸಾರ್ ಗಜ್ವತ್-ಉಲ್-ಹಿಂದ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ ಝಾಕೀರ್ ಮೂಸಾ ಸೇರಿದಂತೆ 78 ಮಂದಿ ಸ್ಥಳೀಯ ಉಗ್ರರು ಹಾಗೂ 23 ಮಂದಿ ವಿದೇಶಿ ಉಗ್ರರನ್ನು ಈ ವರ್ಷ ಸದೆಬಡಿಯಲಾಗಿದೆ. ಮೂಸಾ ಸಾವಿನ ಬಳಿಕ ಹಿಜ್ಬುಲ್ ಮುಜಾಹಿದೀನ್‌ನ ಅನೇಕ ಉಗ್ರರು ಅನ್ಸಾರ್ ಗಜ್ವತ್-ಉಲ್-ಹಿಂದ್ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜತೆಗೆ, ಇತ್ತೀಚಿನ ವರ್ಷಗಳಲ್ಲಿ ಶಸ್ತ್ರ ಕೈಗೆತ್ತಿಕೊಳ್ಳುತ್ತಿರುವ ಯುವಕರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ ಎಂದು ಭದ್ರತಾ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 2014ರಲ್ಲಿ 53 ಯುವಕರು ಉಗ್ರರಾಗಿ ಬದಲಾಗಿದ್ದರೆ, 2015ರಲ್ಲಿ ಇದು 66ಕ್ಕೇರಿಕೆಯಾಗಿತ್ತು.
2016ರಲ್ಲಿ 88 ಹಾಗೂ ಪ್ರಸಕ್ತ ವರ್ಷ ಮೂರೇ ತಿಂಗಳಲ್ಲಿ 50 ಯುವಕರು ಉಗ್ರ ಸಂಘಟನೆಗಳಿಗೆ ಸೇರಿದ್ದಾರೆ. 2010ರಿಂದ 2013ರ ಅವಧಿಯಲ್ಲಿ ಈ ಸಂಖ್ಯೆಗಳು ಕ್ರಮವಾಗಿ 54, 23, 21 ಮತ್ತು 6ಕ್ಕೆ ಇಳಿದಿದ್ದವು. ಈ ಬೆಳವಣಿಗೆಗಳನ್ನು ನೋಡಿದರೆ, ನಾವು ಉಗ್ರ ನಿಗ್ರಹ ನೀತಿಯನ್ನು ಮರುಪರಿ ಶೀಲಿಸಬೇಕಾದ ಅಗತ್ಯವಿದೆ ಎಂದು ಅನಿಸುತ್ತಿದೆ ಎಂದಿದ್ದಾರೆ ಭದ್ರತಾ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.